ಸುಂಟಿಕೊಪ್ಪ, ಜು. ೨೩: ಲೋಕಸಭಾ ಪ್ರತಿಪಕ್ಷದ ನಾಯಕ ರಾಹುಲ್‌ಗಾಂಧಿ ಸೇರಿದಂತೆ ಕಾಂಗ್ರೆಸ್ ಮುಖಂಡರ ಬಂಧನವನ್ನು ವಿರೋಧಿಸಿ ಸುಂಟಿಕೊಪ್ಪ ನಗರ ಕಾಂಗ್ರೆಸ್ ವತಿಯಿಂದ ಕನ್ನಡ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ನೀಟ್ ಪರೀಕ್ಷಾ ಪ್ರಶ್ನೆಪತ್ರಿಕೆಗಳ ಸೋರಿಕೆಯಾಗುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯವನ್ನು ಧಮನಮಾಡುವ ನೀತಿಯನ್ನು ಕೇಂದ್ರ ಸರಕಾರ ಅನುಸರಿಸುತ್ತಿದೆ ಎಂದು ಆರೋಪಿಸಿ ಧಿಕ್ಕಾರ ಘೋಷಣೆಗಳನ್ನು ಕೂಗಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಕೇಂದ್ರ ಸರಕಾರವು ಜನವಿರೋಧಿ ನೀತಿಯನ್ನು ಅನುಸರಿಸುತ್ತಾ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೂಡಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಅಲ್ಲದೆ ತಪ್ಪಿಸ್ಥರ ವಿರುದ್ಧ ತನಿಖೆ ಕೈಗೊಂಡು ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು.

ಇದೇ ಸಂದರ್ಭ ರಾಷ್ಟಿçÃಯ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಲಾಯಿತು.

ಈ ಸಂದರ್ಭ ಸುಂಟಿಕೊಪ್ಪ ನಗರ ಕಾಂಗ್ರೆಸ್ ಅಧ್ಯಕ್ಷ ರಫೀಕ್ ಖಾನ್, ಹೋಬಳಿ ಕಾಂಗ್ರೆಸ್ ಅಧ್ಯಕ್ಷ ರಜಾಕ್, ತಾ.ಪಂ. ಮಾಜಿ ಸದಸ್ಯ ಕೆ.ಎಸ್.ಮಂಜುನಾಥ್, ಜಿ.ಪಂ. ಮಾಜಿ ಸದಸ್ಯೆ ಭಾನುಮತಿ, ಗ್ರಾ.ಪಂ. ಮಾಜಿ ಅಧ್ಯಕ್ಷರುಗಳಾದ ಕೆ.ಇ. ಕರೀಂ, ರೋಸ್‌ಮೇರಿ ರಾಡ್ರಿಗಸ್, ಶಿವಮ್ಮ ಮಹೇಶ್, ಮಾಜಿ ಸದಸ್ಯರುಗಳಾದ ಶಬ್ಬೀರ್, ಆಲಿಕುಟ್ಟಿ, ೭ನೇ ಹೊಸಕೋಟೆ ಗ್ರಾ.ಪಂ. ಮಾಜಿ ಸದಸ್ಯರುಗಳಾದ ಎ.ಪಿ.ರಮೇಶ್, ಮುಸ್ತಾಫ (ಕುಂಞಕುಟ್ಟಿ), ರಜಾಕ್, ಜಿಲ್ಲಾ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಹಕೀಂ, ಹಿರಿಯ ಮುಖಂಡ ಎಂ.ಎ. ವಸಂತ್, ಕಾನ್‌ಬೈಲ್ ವಿಭಾಗದ ಅಧ್ಯಕ್ಷ ಆದಂ ಸೇರಿದಂತೆ ಮತ್ತಿತರರು ಇದ್ದರು.