ವೀರಾಜಪೇಟೆ, ಜು. ೨೪: ವೀರಾಜಪೇಟೆ ಸರಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ಸುಮಾರು ಐದು ತಿಂಗಳ ಗಂಡು ಮಗುವಿನ ಭ್ರೂಣ ಪತ್ತೆಯಾದ ಪ್ರಕರಣಕ್ಕೆ ಸಂಬAಧಿಸಿದAತೆ ವೀರಾಜಪೇಟೆ ಪೊಲೀಸ್ ಠಾಣೆಗೆ ದೂರು ನೀಡಿ ಪೋಷಕರನ್ನು ಪತ್ತೆಹಚ್ಚಿ ಅದನ್ನು ಪೊಲೀಸರ ಸಮ್ಮುಖದಲ್ಲಿ ಪೋಷಕರಿಗೆ ಹಸ್ತಾಂತರ ಮಾಡಲಾಗಿದೆ ಎಂದು ವೀರಾಜಪೇಟೆಯ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ವಿಶ್ವನಾಥ್ ಸಿಂಪಿ ತಿಳಿಸಿದ್ದಾರೆ.
ಘಟನೆಗೆ ಸಂಬAಧಿಸಿದAತೆ ಮಾಹಿತಿ ಬಯಸಿದಾಗ, ಇದರ ಕುರಿತು ಮಾತನಾಡಿದ ಡಾ. ವಿಶ್ವನಾಥ್ ಸಿಂಪಿ ಅವರು, ಈ ಘಟನೆ ಗುರುವಾರ ಬೆಳಿಗ್ಗೆ ಸುಮಾರು ೧೦.೩೦, ೧೧ ಗಂಟೆಯ ವೇಳೆಗೆ ನಡೆದಿದ್ದು, ಆಸ್ಪತ್ರೆಯ ಸಿಬ್ಬಂದಿಯಿAದ ಮಾಹಿತಿ ಬಂದ ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಗಿದೆ.
ಬಳಿಕ ನಗರ ಪೊಲೀಸ್ ಠಾಣೆಗೆ ದೂರು ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಪ್ರಕರಣದ ತನಿಖೆ ವೇಳೆ ಆಸ್ಪತ್ರೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು ಸಂಬAಧಿಸಿದ ಮಹಿಳೆಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಪತ್ತೆಯಾದ ಗಂಡು ಭ್ರೂಣವು ಜೀವಂತವಾಗಿರಲಿಲ್ಲ. ಸಂಬAಧಿತ ಮಹಿಳೆ ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.