*ಗೋಣಿಕೊಪ್ಪ, ಜು. ೨೪: ಕಾನೂರು ಗ್ರಾಮ ಪಂಚಾಯತಿಯಲ್ಲಿ ೨೦೨೫-೨೬ನೇ ಸಾಲಿನ ಉದ್ಯೋಗ ಖಾತ್ರಿ ಮತ್ತು ೧೫ನೇ ಹಣಕಾಸು ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ ತಾ.೨೮ ರಂದು ೧೧ ಗಂಟೆಗೆ ನಡೆಯಲಿದೆ. ಗ್ರಾಮ ಪಂಚಾಯತಿ ನೋಡಲ್ ಅಧಿಕಾರಿ ಹಾಗೂ ಆಡಳಿತಾಧಿಕಾರಿ ಆರ್ ಭಾಸ್ಕರ್ ಅವರ ಅಧ್ಯಕ್ಷತೆಯಲಿ ಮತ್ತು ಸಾಮಾಜಿಕ ಲೆಕ್ಕ ಪರಿಶೋಧನಾ ಸಂಯೋಜಕ ಸತೀಶ್ ಸಮ್ಮುಖದಲ್ಲಿ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.