ಮಡಿಕೇರಿ, ಜು. ೨೪: ಇತ್ತೀಚೆಗೆ ಹಾನಿಗೀಡಾದ ಮಡಿಕೇರಿ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಹಳೆ ಖಾಸಗಿ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಸಂತೋಷ್ ಅಣ್ವೇಕರ್ ಹಾಗೂ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ರಸ್ತೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ವರ್ತಕರು, ವಾಹನ ಚಾಲಕರು ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಗರ ಚೇಂಬರ್ ಆಫ್ ಕಾಮರ್ಸ್ನಿಂದ ಜಿಲ್ಲಾಡಳಿತ, ನಗರಸಭೆ ಹಾಗೂ ಸಂಬAಧಪಟ್ಟ ಇಲಾಖೆಗಳಿಗೆ ತುರ್ತು ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಭೂಕುಸಿತದ ಹಿನ್ನೆಲೆ ವಾಹನಗಳ ಸಂಚಾರ ಮಾರ್ಗವನ್ನು ಬದಲಾಯಿಸಲಾಗಿದ್ದು, ಇದರ ಪರಿಣಾಮ ನಿತ್ಯ ನಗರದಲ್ಲಿ ವಾಹನದಟ್ಟಣೆ ಮಿತಿ ಮೀರಿದೆ. ಇದರಿಂದ ಶಾಲಾ ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ಸಾರ್ವಜನಿಕರು ಹಾಗೂ ಪ್ರವಾಸಿಗರ ಸುಗಮ ಸಂಚಾರಕ್ಕೆ ಅಡಚಣೆಯಾಗಿದೆ. ಕೆಎಸ್ಆರ್ಟಿಸಿ ಬಸ್ಗಳ ಮಾರ್ಗವನ್ನು ಕೂಡ ಬದಲಾಯಿಸಿರುವುದರಿಂದ ಸಕಾಲದಲ್ಲಿ ಸಂಚಾರ ವ್ಯವಸ್ಥೆ ಇಲ್ಲದೆ ಪ್ರಯಾಣಿಕರೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈಗಾಗಲೇ ಮಳೆಗಾಲದ ಹಿನ್ನೆಲೆಯಲ್ಲಿ ವ್ಯಾಪಾರ-ವ್ಯವಹಾರಗಳು ಮಂದಗತಿಯಲ್ಲಿ ಸಾಗುತ್ತಿದೆ. ಇದರ ನಡುವೆಯೇ ರಸ್ತೆ ಸಂಪರ್ಕ ಕಡಿತಗೊಂಡಿರುವುದರಿAದ ಮಡಿಕೇರಿ ನಗರದ ವ್ಯಾಪಾರ ಶೇ.೬೦ ರಷ್ಟು ಕುಸಿದಿದ್ದು, ವರ್ತಕರು ಆರ್ಥಿಕ ನಷ್ಟವನ್ನು ಎದುರಿಸುತ್ತಿದ್ದಾರೆ ಎಂದು ಸಂತೋಷ್ ಅಣ್ವೇಕರ್ ಗಮನ ಸೆಳೆದಿದ್ದಾರೆ.
ಮಡಿಕೇರಿ ನಗರ ಜಿಲ್ಲಾ ಕೇಂದ್ರ ಸ್ಥಾನವಾಗಿರುವುದರಿಂದ ಮುಖ್ಯ ರಸ್ತೆಯ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸಬೇಕು. ಸಂಬAಧಪಟ್ಟ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ಹೆಚ್ಚುವರಿ ಕೆಲಸಗಾರರನ್ನು ನೇಮಿಸಬೇಕು. ನೂತನ ತಂತ್ರಜ್ಞಾನವನ್ನು ಬಳಸಿ ಕಾಮಗಾರಿಯನ್ನು ಚುರುಕುಗೊಳಿಸಬೇಕು.
ಮುಂದಿನ ಐದು ದಿನಗಳೊಳಗೆ ಕಾಮಗಾರಿ ಪೂರ್ಣಗೊಳಿಸಿ ವಾಹನಗಳ ಹಾಗೂ ಪಾದಚಾರಿಗಳ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು. ವಾಹನದಟ್ಟಣೆಯನ್ನು ತಪ್ಪಿಸಲು ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.