ಸಿದ್ದಾಪುರ, ಜು. ೨೪: ದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ನೆಲ್ಲಿಹುದಿಕೇರಿ ಗ್ರಾಮದ ಸಿ.ಪಿ.ಐ.ಎಂ. ಪಕ್ಷದ ವತಿಯಿಂದ ನೆಲ್ಲಿಹುದಿಕೇರಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ಪಿ.ಆರ್. ಭರತ್ ಮಾತನಾಡಿ, ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಅದನ್ನು ಪ್ರತಿಭಟಿಸಿ ವಿದ್ಯಾರ್ಥಿ ಸಂಘ ನಡೆಸಿದ ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರು ವಿದ್ಯಾರ್ಥಿಗಳ ಮೇಲೆ ನಡೆಸಿದ ಲಾಠಿ ಪ್ರಹಾರ ಖಂಡನೀಯ ಎಂದರು. ಕೂಡಲೇ ಕೇಂದ್ರದ ಶಿಕ್ಷಣ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಿ.ಪಿ.ಐ.ಎಂ. ಪಕ್ಷದ ಪದಾಧಿಕಾರಿಗಳಾದ ಎನ್.ಡಿ. ಕುಟ್ಟಪ್ಪನ್, ಟಿ.ಟಿ. ಉದಯಕುಮಾರ್, ಜೋಸ್ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.