ಶನಿವಾರಸಂತೆ, ಜು. ೨೭: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ವತಿಯಿಂದ ಸಮೀಪದ ಅಂಕನಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ರೂ. ೧.೫೦ ಲಕ್ಷ ಸಹಾಯಧನ ಮಂಜೂರಾಗಿದ್ದು, ಮಂಜೂರಾತಿ ಪತ್ರವನ್ನು ವಿತರಣೆ ಮಾಡಲಾಯಿತು.

ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಜನಾ ಜಿಲ್ಲಾ ನಿರ್ದೇಶಕ ವಿಠಲ್ ಸಾಲಿಯಾನ್ ಮಾತನಾಡಿ, ದೇವಸ್ಥಾನದ ಆವರಣದಲ್ಲಿ ಸ್ವಚ್ಛತೆ ಕಾಪಾಡುವುದು ಗ್ರಾಮಸ್ಥರ ಜವಾಬ್ದಾರಿ ಎಂದರು.

ಈ ಸಂದರ್ಭ ತಾಲೂಕು ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ಶನಿವಾರಸಂತೆ ವಲಯ ಮೇಲ್ವಿಚಾರಕ ಅಚ್ಚುತ್, ದೇವಸ್ಥಾನ ಸಮಿತಿ ಅಧ್ಯಕ್ಷ ಎಸ್.ಎಸ್. ಈರಪ್ಪ, ಕಾರ್ಯದರ್ಶಿ ಎ.ಎಸ್. ವರದರಾಜ್, ನಿರ್ದೇಶಕರಾದ ಸತೀಶ್, ಸುಂದರೇಶ್, ನವೀನ್, ಗಿರೀಶ್, ತಮ್ಮಯ್ಯ, ವಿಶ್ವನಾಥ್, ಗಣೇಶ್, ರೂಪೇಶ್ ಹಾಗೂ ಸದಸ್ಯರು, ಸೇವಾ ಪ್ರತಿನಿಧಿಗಳಾದ ಪವಿತ್ರಾ, ಮಂಜುಳಾ ಹಾಜರಿದ್ದರು.