ಕೂಡಿಗೆ, ಜು. ೨೭: ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ೨೦೨೬- ೨೭ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಕುಶಾಲನಗರ ನಗರ ಮತ್ತು ಸೋಮವಾರಪೇಟೆ ತಾಲೂಕುಗಳ ಕ್ರೀಡಾಕೂಟದ ಪೂರ್ವಭಾವಿ ಸಭೆ ನಡೆಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎ. ಗಣಪತಿ ಅವರು ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಕ್ರೀಡೆಯೂ ಸಹ ಮುಖ್ಯವಾಗಿದೆ ಕೊಡಗು ಜಿಲ್ಲೆ, ಕ್ರೀಡೆಗೆ ಬಹಳ ಹೆಸರುವಾಸಿಯಾಗಿದೆ. ಪದವಿಪೂರ್ವ ಶಿಕ್ಷಣ ಹಂತದಿAದಲೇ ವಿದ್ಯಾರ್ಥಿಗಳಿಗೆ ಕ್ರೀಡೆಯ ಬಗ್ಗೆ ಉತ್ತಮವಾದ ಮಾರ್ಗದರ್ಶನ ನೀಡಿದರೆ ಅವರಿಗೆ ಮುಂದೆ ಉಜ್ವಲವಾದ ಭವಿಷ್ಯವಿದೆ ಎಂದು ತಿಳಿಸಿದರು.
ಸಭೆಯಲ್ಲಿದ್ದ ಪ್ರಾಂಶುಪಾಲರು ದೈಹಿಕ ಶಿಕ್ಷಣ ಉಪನ್ಯಾಸಕರು ಹಾಗೂ ಉಪನ್ಯಾಸಕರಿಗೆ ತಮ್ಮ ಕಾಲೇಜಿನಲ್ಲಿ ವಹಿಸಿಕೊಂಡಿರುವ ಕ್ರೀಡೆಗಳನ್ನು ಯಾವುದೇ ಲೋಪವಿಲ್ಲದಂತೆ ಉತ್ತಮವಾಗಿ ನಡೆಸಿ ಕೊಡಬೇಕೆಂದು ಕರೆ ನೀಡಿದರು. ಶನಿವಾರಸಂತೆ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಅಶೋಕ್ ಕ್ರೀಡೆಗಳ ಪ್ರಮುಖ ಜವಾಬ್ದಾರಿಗಳನ್ನು ವಿವಿಧ ಕಾಲೇಜಿಗೆ ಹಂಚಿಕೆ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕೂಡಿಗೆ ಕಾಲೇಜಿನ ಪ್ರಾಂಶುಪಾಲ ಹಂಡ್ರAಗಿ ನಾಗರಾಜ್ ಕೊಡಗಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯು ಅತ್ಯುತ್ತಮವಾಗಿ ಕ್ರೀಡೆಗಳನ್ನು ನಡೆಸಿಕೊಂಡು ಬಂದಿದೆ. ತಾವುಗಳು ಯಾವುದೇ ಲೋಪವಾಗದಂತೆ ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಜಿಲ್ಲಾ ಮತ್ತು ರಾಜ್ಯಮಟ್ಟಕ್ಕೆ ಆಯ್ಕೆ ಮಾಡಲು ಸಹಕರಿಸಬೇಕೆಂದು ತಿಳಿಸಿದರು. ಸಭೆಯಲ್ಲಿ ಪ್ರಾಂಶುಪಾಲರಾದ ಮಂದಪ್ಪ ಉಪಸ್ಥಿತರಿದ್ದರು. ಕುಶಾಲನಗರ ಮತ್ತು ಸೋಮವಾರಪೇಟೆ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ದೈಹಿಕ ಶಿಕ್ಷಣ ಉಪನ್ಯಾಸಕರು ಹಾಗೂ ಉಪನ್ಯಾಸಕರು ಭಾಗವಹಿಸಿದ್ದರು.