ಮಡಿಕೇರಿ, ಜು. ೨೭: ಕೊಡಗು ವಿಶ್ವವಿದ್ಯಾಲಯದ ೨೦೨೫-೨೬ನೇ ಸಾಲಿನ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಬಿ.ಎಡ್ ಪದವಿ ಪರೀಕ್ಷಾ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ. ಪರೀಕ್ಷೆಯ ಮೌಲ್ಯಮಾಪನ ಪೂರ್ಣವಾಗಿ ಎರಡು ದಿನದಲ್ಲಿ ಅತೀ ಶೀಘ್ರವಾಗಿ ವಿಶ್ವವಿದ್ಯಾಲಯವು ಫಲಿತಾಂಶ ವನ್ನು ಪ್ರಕಟಿಸಿದೆ.
ಜುಲೈ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ ವೀರಾಜಪೇಟೆಯ ಸರ್ವೋದಯ ಬಿ.ಎಡ್ ಕಾಲೇಜು ಮತ್ತು ಪೊನ್ನಂಪೇಟೆಯ ಸಾಯಿ ಶಂಕರ್ ಕಾಲೇಜುಗಳ ಒಟ್ಟು ಸುಮಾರು ೨೦೦ ವಿದ್ಯಾರ್ಥಿಗಳು ಹಾಜರಾಗಿದ್ದರು. ಮೌಲ್ಯಮಾಪನ ಪ್ರಕ್ರಿಯೆಯನ್ನು ಘಟಕ ಮಹಾವಿದ್ಯಾಲಯ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಮೌಲ್ಯಮಾಪನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲೆಯ ಮೌಲ್ಯಮಾಪಕರು ಸಕ್ರಿಯವಾಗಿ ಭಾಗವಹಿಸಿ ಮೌಲ್ಯಮಾಪನ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.
ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬAಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (UUಅಒS) ಮೂಲಕ ಯಶಸ್ವಿಯಾಗಿ ನಡೆಸ ಲಾಗಿದ್ದು, ಬಿ.ಎಡ್ ಪದವಿ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶವನ್ನು UUಅಒS ಅಥವಾ ಕೊಡಗು ವಿಶ್ವ ವಿದ್ಯಾಲಯದ ವೆಬ್‌ಸೈಟ್ ಏUಏ.ಏಚಿಡಿಟಿಚಿಣಚಿಞಚಿ.gov.iಟಿ ಮುಖಾಂತರ ಪಡೆಯಲು ಲಭ್ಯವಿದೆ. ಪರೀಕ್ಷಾ ಫಲಿತಾಂಶವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು UUಅಒS ತಂತ್ರಾAಶದಲ್ಲಿ ಪ್ರಕಟಿಸಿದರು. ಇದೇ ಸಂದರ್ಭದಲ್ಲಿ ಕೊಡಗು ವಿವಿ ಕುಲಸಚಿವರು (ಮೌಲ್ಯಮಾಪನ) ಡಾ. ಸುರೇಶ್ ಎಂ. ಮತ್ತು ವಿಶೇಷಾಧಿಕಾರಿ (ಪರೀಕ್ಷಾಂಗ) ಪ್ರೊ. ರವಿಶಂಕರ್ ಎಂ.ಎನ್. ಮತ್ತು UUಅಒS ಸಿಬ್ಬಂದಿ ಉಪಸ್ಥಿತರಿದ್ದರು.