ಮಡಿಕೇರಿ, ಜು. ೨೭: ಸರ್ಕಾರದ ಆದೇಶದಂತೆ ಕೊಡಗು ಜಿಲ್ಲೆಯ ಮಡಿಕೇರಿ ನಗರಸಭೆಗೆ ೩ ಸಂಖ್ಯಾತಿರಿಕ್ತ ಹುದ್ದೆಗಳನ್ನು ಸೃಜಿಸಲಾಗಿದ್ದು, ಈ ಹುದ್ದೆಗಳನ್ನು ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ನೇಮಕಾತಿ ಮಾಡಿಕೊಳ್ಳಲು ಅನುಮೋದನೆ ದೊರೆತಿದೆ. ಗ್ರೂಪ್ “ಡಿ” ಹುದ್ದೆಗಳು ಸಕ್ಷಮ ಪ್ರಾಧಿಕಾರ ಆಯಾಯ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿರುವುದರಿಂದ ಈ ಹುದ್ದೆಗಳ ನೇಮಕಾತಿಗೆ ಸಂಬAಧಿಸಿದAತೆ ಸರ್ಕಾರದ ಆದೇಶಗಳಲ್ಲಿನ ಷರತ್ತುಗಳನ್ವಯ ಜಿಲ್ಲಾಧಿಕಾರಿಗಳ ಹಂತದಲ್ಲಿ ನಿಯಮಾನುಸಾರ ನೇಮಕಾತಿ ಕ್ರಮವಹಿಸಲು ಆದೇಶಿಸಲಾಗಿರುತ್ತದೆ.

ಅದರಂತೆ ಕೊಡಗು ಜಿಲ್ಲೆಯ ಮಡಿಕೇರಿ ನಗರಸಭೆಯಲ್ಲಿ ನೇರಪಾವತಿ, ದಿನಗೂಲಿ ಕ್ಷೇಮಾಭಿವೃದ್ಧಿ ಅಧಿನಿಯಮ, ಸಮಾನ ಕೆಲಸಕ್ಕೆ ಸಮಾನ ವೇತನದಡಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ/೦೨/ಸೇಹಿಮ/೨೦೨೬, ದಿನಾಂಕ:೧೩-೦೫-೨೦೨೬ರಲ್ಲಿನ ಮಾರ್ಗಸೂಚಿಗಳಂತೆ ಹೊಸದಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ ಜುಲೈ, ೨೪, ಅರ್ಜಿಯನ್ನು ಮಡಿಕೇರಿ ನಗರಸಭೆಯ ಕಚೇರಿಯಲ್ಲಿ ಕಚೇರಿ ವೇಳೆಯಲ್ಲಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಆಗಸ್ಟ್ ೨೪ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಮಡಿಕೇರಿ ನಗರಸಭೆಯ ಕಚೇರಿ ಮತ್ತು ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ತಿಳಿಸಿದ್ದಾರೆ.