ಸಿದ್ದಾಪುರ, ಜು. ೨೮: ಇತಿಹಾಸ ಪ್ರಸಿದ್ಧ ಜಿಲ್ಲೆಯ ಏಕೈಕ ಪುರಾತನ ಶ್ರೀ ಸತ್ಯನಾರಾಯಣ ದೇವಾಲಯದಲ್ಲಿ ಗುರುಪೂರ್ಣಿಮೆಯ ಅಂಗವಾಗಿ ಗುರುವಂದನಾ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು.
ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಗುರುಪೂರ್ಣಿಮೆಯ ಮಹತ್ವ ಹಾಗೂ ಶ್ರೀ ಸತ್ಯನಾರಾಯಣ ದೇವರ ಮಹಿಮೆಯ ಕುರಿತು ಪ್ರವಚನ ನೀಡಿದರು.
ಶಾಸಕ ಡಾ. ಮಂತರ್ ಗೌಡ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಬಳಿಕ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಮಹಾಪೂಜೆ ನೆರವೇರಿಸಲಾಯಿತು. ಪೂಜೆಯ ನಂತರ ಭಕ್ತಾದಿಗಳಿಗೆ ತೀರ್ಥ-ಪ್ರಸಾದ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಹಾಸನ ಜಿಲ್ಲೆಯ ಶಾಸಕ ಸ್ವರೂಪ್ ಗೌಡ ದಂಪತಿ ಹಾಗೂ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ, ದೇವಾಲಯದ ತಕ್ಕ ಮುಖ್ಯಸ್ಥರು, ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಗ್ರಾಮಸ್ಥರು ಹಾಗೂ ಭಕ್ತರು ಉಪಸ್ಥಿತರಿದ್ದರು.