ಸೋಮವಾರಪೇಟೆ, ಜು. ೨೮: ಪಟ್ಟಣದಲ್ಲಿರುವ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಯಂ ಅರೆವಳಿಕೆ ತಜ್ಞರು ಹಾಗೂ ಮೂಳೆ ವೈದ್ಯರನ್ನು ತಕ್ಷಣ ನೇಮಕಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಆಗ್ರಹಿಸಿದೆ.

ಈ ಸಂಬAಧ ಕೊಡಗು ಜಿಲ್ಲಾಧ್ಯಕ್ಷ ಕೆ.ಎನ್.ದೀಪಕ್ ನೇತೃತ್ವದಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಜಮೀರ್ ಅಹಮದ್ ಅವರಿಗೆ ಮನವಿ ಸಲ್ಲಿಸಲಾಯಿತು. ಬಳಿಕ ಮಾತನಾಡಿದ ದೀಪಕ್, ಸೋಮವಾರಪೇಟೆ ತಾಲೂಕು ಗುಡ್ಡಗಾಡು ಹಾಗೂ ಗ್ರಾಮೀಣ ಪ್ರದೇಶಗಳಿಂದ ಕೂಡಿದ್ದು, ಮಳೆಗಾಲದಲ್ಲಿ ಅಪಘಾತಗಳು ಸೇರಿದಂತೆ ತುರ್ತು ಚಿಕಿತ್ಸೆಗಳ ಸೇವೆ ಹೆಚ್ಚಿದೆ. ಆದರೆ ಆಸ್ಪತ್ರೆಯಲ್ಲಿ ಖಾಯಂ ಮೂಳೆ ವೈದ್ಯರ ಕೊರತೆಯಿಂದ ರೋಗಿಗಳು ಮಡಿಕೇರಿ ಹಾಗೂ ಮಂಗಳೂರಿನAತಹ ದೂರದ ಆಸ್ಪತ್ರೆಗಳಿಗೆ ತೆರಳುವ ಅನಿವಾರ್ಯತೆ ಎದುರಿಸುತ್ತಿದ್ದಾರೆ ಎಂದು ಹೇಳಿದರು.

ಪ್ರಸ್ತುತ ಇರುವ ಮೂಳೆ ವೈದ್ಯರು ನಿಯಮಿತವಾಗಿ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿದ್ದು, ವೈದ್ಯರ ಹುದ್ದೆ ಕೇವಲ ದಾಖಲೆಗಳಿಗೆ ಮಾತ್ರ ಸೀಮಿತವಾಗಿದೆ ಎಂದು ದೂರಿದರು.

ಅಲ್ಲದೆ, ಅರವಳಿಕೆ ತಜ್ಞರು ವಾರದಲ್ಲಿ ಕೇವಲ ಎರಡು ದಿನ ಮಾತ್ರ ಸೇವೆ ಸಲ್ಲಿಸುತ್ತಿರುವುದರಿಂದ ಶಸ್ತçಚಿಕಿತ್ಸೆಗಳು, ಹೆರಿಗೆ ಶಸ್ತçಚಿಕಿತ್ಸೆಗಳು ಹಾಗೂ ಇತರೆ ತುರ್ತು ಚಿಕಿತ್ಸಾ ಸೇವೆಗಳಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಖಾಯಂ ಅರವಳಿಕೆ ತಜ್ಞರನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ಬೇಡಿಕೆಗಳನ್ನು ಶೀಘ್ರವೇ ಈಡೇರಿಸದಿದ್ದಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ನೇತೃತ್ವದಲ್ಲಿ ಸೋಮವಾರಪೇಟೆ ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.

ಈ ಸಂದರ್ಭ ಜಿಲ್ಲಾ ಯುವ ಘಟಕದ ಅಧ್ಯಕ್ಷ ವಸಂತ್ ಆಚಾರ್ಯ, ತಾಲೂಕು ಘಟಕದ ಅಧ್ಯಕ್ಷ ಗಣೇಶ್ ಗೌಡ, ನಗರ ಘಟಕದ ಅಧ್ಯಕ್ಷ ಬಿ.ಎಸ್. ಮಂಜುನಾಥ್, ಜಿಲ್ಲಾ ಕಾರ್ಯದರ್ಶಿ ಮಂಜುನಾಥ್, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ರೂಪಾ ಐಗೂರು, ನಗರ ಕಾರ್ಯದರ್ಶಿ ಕೆ.ಪಿ. ರವೀಶ್, ಶೇಖರ್ ತಾಕೇರಿ, ವೆಂಕಟೇಶ್, ನಿತನ್, ಮೊಹಮ್ಮದ್ ಶಫೀ, ಹಿನಕನಹಳ್ಳಿ ಶಿವಣ್ಣ, ದೇವರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.