ಕುಶಾಲನಗರ, ಜು. ೨೮: ಗುರು ಪೂರ್ಣಿಮ ಅಂಗವಾಗಿ ಕುಶಾಲನಗರ ಹಿಂದೂ ಜನಜಾಗೃತಿ ಸಮಿತಿಯ ಆಶ್ರಯದಲ್ಲಿ ಕುಶಾಲನಗರ ಗೌಡ ಸಮಾಜದಲ್ಲಿ ತಾ. ೨೯ ರಂದು (ಇಂದು) ಸಂಜೆ ೪ ಗÀಂಟೆಗೆ ಗುರು ಪೂರ್ಣಿಮ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
* ಕುಶಾಲನಗರ: ಗುರು ಪೂರ್ಣಿಮ ಅಂಗವಾಗಿ ಕುಶಾಲನಗರ ಸಾಯಿಬಾಬಾ ಮಂದಿರದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ ೮.೩೦ಕ್ಕೆ ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳು ಫಲ ತಾಂಬೂಲಗಳೊAದಿಗೆ ಪಾಲ್ಗೊಂಡು ಸಾಮೂಹಿಕ ಪೂಜೆ ಸಲ್ಲಿಸುತ್ತಾರೆ. ದೇವಾಲಯದಲ್ಲಿ ಬೆಳಗ್ಗಿನಿಂದ ಶಿರಡಿ ಸಾಯಿಬಾಬಾ ಅವರಿಗೆ ವಿಶೇಷ ಆರತಿ ಕಾರ್ಯಕ್ರಮಗಳು ನಡೆಯಲಿವೆ ಎಂದು ದೇವಾಲಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
* ಕುಶಾಲನಗರ - ಕೊಪ್ಪ ಗಡಿಭಾಗದ ಕಾವೇರಿ ಪ್ರತಿಮೆಗೆ ಭಾರವಿ ಕನ್ನಡ ಸಂಘ ಆಶ್ರಯದಲ್ಲಿ ಅಭಿಷೇಕ ಆರತಿ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.