ಕರಿಕೆ, ಜು. ೨೯: ಇಲ್ಲಿಗೆ ಸಮೀಪದ ಚೆತ್ತುಕಾಯದ ಹದಿಮೂರನೇ ಮೈಲು ಬಳಿ ಭಾಗಮಂಡಲ - ಕರಿಕೆ - ಕೇರಳ ಅಂತರರಾಜ್ಯ ಹೆದ್ದಾರಿಯಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಗೆ ಬೃಹತ್ ಗಾತ್ರದ ಬಿದಿರು ಹಿಂಡೊAದು ಬುಡಸಮೇತ ರಸ್ತೆಗೆ ಉರುಳಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿ ಬಸ್ ಹಾಗೂ ಇತರ ವಾಹನ ಸವಾರರು ರಸ್ತೆಯಲ್ಲಿ ಸಿಲುಕಿ ಪರದಾಡಿದ ಘಟನೆ ನಡೆಯಿತು.
ನಂತರ ಗ್ರಾಮಸ್ಥರ ಸಹಕಾರದಿಂದ ತೆರವು ಮಾಡಿ ವಾಹನಗಳ ಸಂಚಾರಕ್ಕೆ ಅನುವು ಮಾಡಿ ಕೊಡಲಾಯಿತು.
- ಸುಧೀರ್