ಮಡಿಕೇರಿ, ಜು. ೨೯: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ೧೫ನೇ ಕೊಡವ ಪುಸ್ತಕ ಪತ್ತಾಯ ಕಾರ್ಯಕ್ರಮ ಪೊನ್ನಂಪೇಟೆಯ ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ತಾ. ೩೦ ರಂದು ಮಧ್ಯಾಹ್ನ ೩.೩೦ ಗಂಟೆಗೆ ನಡೆಯಲಿದೆ.

ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ಕೊಡವ ಎಜುಕೇಶನ್ ಸೊಸೈಟಿ ಅಧ್ಯಕ್ಷ ಡಾ|| ಮುಕ್ಕಾಟಿರ ಸಿ.ಕಾರ್ಯಪ್ಪ, ಡಾ. ಮಚ್ಚಾರಂಡ ಮಾದಪ್ಪ ಉತ್ತಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಪೊನ್ನಂಪೇಟೆ ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಪ್ರಾಶುಂಪಾಲ ಡಾ. ಎಂ. ಬಸವರಾಜ್ ಹಾಗೂ ಪೊನ್ನಂಪೇಟೆ ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಪ್ರೀ ಯೂನಿವರ್ಸಿಟಿ ಕಾಲೇಜಿನ ಪ್ರಾಂಶುಪಾಲೆ ಡಾ. ಸಣ್ಣುವಂಡ ರೋಹಿಣಿ ತಿಮ್ಮಯ್ಯ ಅವರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಅಕಾಡೆಮಿಯ ಸದಸ್ಯರು, ಗ್ರಾಮಸ್ಥರು ಭಾಗವಹಿಸಲಿದ್ದಾರೆ ಎಂದು ಅಕಾಡೆಮಿಯ ರಿಜಿಸ್ಟಾçರ್ ತಿಳಿಸಿದ್ದಾರೆ.