ಕೋವರ್‌ಕೊಲ್ಲಿ ಇಂದ್ರೇಶ್

ಬೆAಗಳೂರು, ಜು. ೩೦: ಧರ್ಮಸ್ಥಳದ ಆಸುಪಾಸಿನ ಅರಣ್ಯದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬAಧಿಸಿದAತೆ ರಾಜ್ಯ ಸರ್ಕಾರವು ಎಸ್‌ಐಟಿ(ವಿಶೇಷ ತನಿಖಾ ತಂಡ)ಯನ್ನು ರಚಿಸಿತ್ತು. ಎಸ್‌ಐಟಿಯು ತನಿಖೆಯನ್ನು ಕೈಗೆತ್ತಿಕೊಂಡ ನಂತರ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಬಂಗ್ಲೆಗುಡ್ಡೆಯಲ್ಲಿ ಬಿಗಿ ಬಂದೋಬಸ್ತ್ನಲ್ಲಿ ಉತ್ಖನನ ನಡೆಸಲಾಗಿತ್ತು.

ನೇತ್ರಾವತಿ ಸ್ನಾನಘಟ್ಟದ ಪಕ್ಕದಲ್ಲೇ ದೂರುದಾರರು ತೋರಿಸಿದ ಸ್ಥಳದಲ್ಲಿ ನಡೆಸಿದ ಉತ್ಖನನದ ವೇಳೆ ಹಲವು ಶವಗಳ ಅವಶೇಷಗಳು ಪತ್ತೆಯಾಗಿದ್ದವು. ಸ್ಥಳದಲ್ಲೇ ಸಿಕ್ಕಿದ ಐಡಿ ಕಾರ್ಡ್, ವಸ್ತು, ಬಟ್ಟೆಗಳ ಆಧಾರದಲ್ಲಿ ಮೂರು ಅಸ್ಥಿಪಂಜರಗಳ ಗುರುತನ್ನು ಅಂದಾಜಿಸಲಾಗಿತ್ತು. ಆ ಅಸ್ಥಿಪಂಜರಗಳ ಪೈಕಿ ಮೂರು ಅಸ್ಥಿಪಂಜರಗಳ ಗುರುತು ಇದೀಗ ಬೆಂಗಳೂರಿನ ಎಫ್‌ಎಸ್‌ಎಲ್ ನಡೆಸಿದ ಡಿಎನ್‌ಎ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಗುರುತು ಪತ್ತೆಗಾಗಿ ಮೂವರ ಕುಟುಂಬಸ್ಥರಿAದ ಡಿಎನ್‌ಎ ಸಂಗ್ರಹಿಸಲಾಗಿತ್ತು. ಅದನ್ನು ಮೂರು ಅಸ್ಥಿಪಂಜರಗಳ ಡಿಎನ್‌ಎ ಕುಟುಂಬಸ್ಥರ ಮಾದರಿಗಳೊಂದಿಗೆ ತಾಳೆ ನೋಡಿದಾಗ ಮೂರೂ ವ್ಯಕ್ತಿಗಳ ಗುರುತು ಪತ್ತೆ ಆಗಿದೆ.

ಡಿಎನ್‌ಎ ಪರೀಕ್ಷೆಯಲ್ಲಿ ಗುರುತು ದೃಢಪಟ್ಟಿರುವವರು ಕೊಡಗು ಜಿಲ್ಲೆಯ ವೀರಾಜಪೇಟೆ ತಾಲೂಕಿನ ಟಿ. ಶೆಟ್ಟಿಗೇರಿ ಗ್ರಾಮದ ಯು.ಬಿ. ಅಯ್ಯಪ್ಪ (೭೦), ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದಾಸರಕಲ್ಲಹಳ್ಳಿಯ ಆದಿಶೇಷ (೨೭) ಹಾಗೂ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮೀಸಗಾಣಹಳ್ಳಿ ಗ್ರಾಮದ ಕೃಷ್ಣಪ್ಪ (೮೫) ಎಂದು ಮೂಲಗಳು ತಿಳಿಸಿವೆ. ಕೊಡಗು ಜಿಲ್ಲೆಯ ಯು.ಬಿ. ಅಯ್ಯಪ್ಪ (೭೦) ಅವರು ೨೦೧೭ರ ಜೂನ್ ೨೫ ರಂದು ಮೈಸೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದ್ದರು. ಮತ್ತೆ ಮನೆಗೆ ವಾಪಸ್ ಆಗಿರಲಿಲ್ಲ. ಈ ಸಂಬAಧ ಕುಟ್ಟ ವೃತ್ತದ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಜುಲೈ ೧೫ ರಂದು ಎಸ್‌ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅಂತಿಮ ವರದಿಯಲ್ಲಿ ಅಸ್ಥಿಪಂಜರಗಳ ಗುರುತು ಪತ್ತೆ ಹಾಗೂ ಡಿಎನ್‌ಎ ಪರೀಕ್ಷೆಗೆ ಸಂಬAಧಿಸಿದ ವಿವರಗಳನ್ನು ಉಲ್ಲೇಖಿಸಲಾಗಿದೆ. ಮೃತರ ಅಸ್ಥಿಗಳು ಎಸ್‌ಐಟಿ ವಶದಲ್ಲಿಯೇ ಇದ್ದು ಇದೀಗ ಗುರುತು ಪತ್ತೆ ಆಗಿರುವ ಹಿನ್ನೆಲೆಯಲ್ಲಿ ಮೃತರ ವಾರೀಸುದಾರರು, ಕುಟುಂಬಸ್ಥರು ಎಸ್‌ಐಟಿಗೆ ಮನವಿ ಸಲ್ಲಿಸಿದಲ್ಲಿ, ಕೋರ್ಟಿನ ಅನುಮತಿ ಪಡೆದು ಅವರಿಗೆ ಅಸ್ಥಿಗಳನ್ನು ನೀಡಬಹುದಾಗಿದೆ ಎಂದು ಎಸ್‌ಐಟಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.