ಮಡಿಕೇರಿ, ಜು. ೩೦: ಕಳೆದ ಹಲವು ದಶಕಗಳಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳು ಹಾಗೂ ಮೌಲ್ಯಗಳಿಗೆ ಬದ್ಧನಾಗಿ, ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ಸಂಘಟನೆಯ ಬಲವರ್ಧನೆಗಾಗಿ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದೇನೆ; ಪಕ್ಷವು ಎದುರಿಸಿದ ಪ್ರತಿಯೊಂದು ಸವಾಲಿನ ಸಂದರ್ಭದಲ್ಲೂ ಮುಂಚೂಣಿಯಲ್ಲಿ ನಿಂತು ಸಂಘಟನೆಯನ್ನು ಗಟ್ಟಿಗೊಳಿಸಲು ಶ್ರಮಿಸಿರುವ ತೃಪ್ತಿ ತನಗಿದ್ದು, ಜಿಲ್ಲಾ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ತಾನು ಕೂಡ ಆಕಾಂಕ್ಷಿ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಎಂ. ಅಬ್ದುಲ್ ಲತೀಫ್ ತಿಳಿಸಿದ್ದಾರೆ.
ಮಂಡಲ ಪಂಚಾಯಿತಿ ಸದಸ್ಯನಾಗಿ, ಎರಡು ಬಾರಿ ತಾಲೂಕು ಪಂಚಾಯಿತಿ ಸದಸ್ಯನಾಗಿ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯನಾಗಿ ಕಳೆದ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸುವ ಮೂಲಕ ಪಕ್ಷದ ಮೇಲಿನ ಬದ್ಧತೆಯನ್ನು ಪ್ರದರ್ಶಿಸಿದ್ದೇನೆ ಎಂದಿದ್ದಾರೆ. ಅವಕಾಶ ದೊರೆತರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಿಷ್ಠಗೊಳಿಸಲು ಹಾಗೂ ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗಾಗಿ ಕಾರ್ಯನಿರ್ವಹಿಸುವ ಭರವಸೆಯನ್ನು ಲತೀಫ್ ನೀಡಿದ್ದಾರೆ.