ಕೂಡಿಗೆ, ಜು. ೩೦: ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಉತ್ತರಾಧಿಕ್ರಿಯೆ, ಶ್ರದ್ಧಾಂಜಲಿ ಕಾರ್ಯಕ್ರಮ ಹಾಸನ ಹಾಲು ಒಕ್ಕೂಟದ ಕೊಡಗು ಜಿಲ್ಲಾ ನಿರ್ದೇಶಕ ಕೆ.ಕೆ. ಹೇಮಂತ್ ಕುಮಾರ್ ಅವರ ನೇತೃತ್ವದಲ್ಲಿ ಕೂಡಿಗೆ ಡೈರಿಯ ಸಭಾಂಗಣದಲ್ಲಿ ನಡೆಯಿತು.
ದಿ. ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಮಾಡುವ ಮೂಲಕ ಹೇಮಂತ್ ಕುಮಾರ್ ನೆರವೇರಿಸಿದರು. ಈ ಸಂದರ್ಭ ಕೂಡಿಗೆ ಡೈರಿಯ ಅಧಿಕಾರಿ ವರ್ಗ, ಸಿಬ್ಬಂದಿ, ಕಾರ್ಮಿಕರು, ಕೂಡಿಗೆ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು, ಡೈರಿಯ ನಿವೃತ್ತ ನೌಕರರು ಹಾಜರಿದ್ದು ಶ್ರದ್ಧಾಂಜಲಿ ಸಲ್ಲಿಸಿದರು. ಕೂಡಿಗೆಯ ಶ್ರೀ ಶಕ್ತಿ ವೃದ್ಧಾಶ್ರಮದ ವೃದ್ಧರಿಗೆ, ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಾರ್ವಜನಿಕರಿಗೆ ಅನ್ನದಾನ ನಡೆಯಿತು.
ಈ ಸಂದರ್ಭ ಡೈರಿ ವ್ಯವಸ್ಥಾಪಕ ನಂದೀಶ್, ಉಪ ವ್ಯವಸ್ಥಾಪಕ ಅನಿಲ್ ಕುಮಾರ್, ಮಾರುಕಟ್ಟೆ ವ್ಯವಸ್ಥಾಪಕ ಮಲ್ಲೇಶ್, ಕರ್ನಾಟಕ ರಾಜ್ಯ ಮಹಾ ಮಂಡಲ ಲ್ಯಾಪ್ ಸಹಕಾರ ಸಂಘದ ಅಧ್ಯಕ್ಷ ಎಸ್.ಆರ್. ಅರುಣ್ ರಾವ್, ಕೂಡಿಗೆ ಸಹಕಾರ ಸಂಘದ ಉಪಾಧ್ಯಕ್ಷ ವಿ. ಬಸಪ್ಪ, ನಿರ್ದೇಶಕರುಗಳಾದ ಕೆ.ಪಿ. ರಾಜು, ಎಸ್.ಎಸ್ ಕೃಷ್ಣ, ರಾಮಚಂದ್ರ, ನಾಗರಾಜು, ಜಯಶ್ರೀ, ರಮೇಶ್, ಕುಮಾರ್, ಹಾಲು ಉತ್ಪಾದಕ ಸಂಘಗಳ ಮೇಲ್ವಿಚಾರಕಿ ವೀಣಾ, ಜಿಲ್ಲಾ ಯೂನಿಯನ್ ಸಹಕಾರ ಸಂಘದ ನಿರ್ದೇಶಕ ಎಸ್.ಆರ್ ಸುನಿಲ್ ರಾವ್ ಸೇರಿದಂತೆ ಡೈರಿಯ ವಿವಿಧ ವಿಭಾಗ ಅಧಿಕಾರಿ ವರ್ಗದವರು, ಸಿಬ್ಬಂದಿ ವರ್ಗ, ಕನ್ನಡಪರ ಸಂಘಟನೆಗಳ ಪ್ರಮುಖರು ಮತ್ತಿತರರು ಇದ್ದರು.