ಮಡಿಕೇರಿ, ಜು. ೩೧: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿರುವ ಉಡುಪಿ ಕ್ಷೇತ್ರದ ಶಾಸಕ ಯಶಪಾಲ್ ಸುವರ್ಣ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಮಡಿಕೇರಿ ನಗರ ಠಾಣೆಯಲ್ಲಿ ದೂರು ನೀಡಿದೆ.

ದೂರು ನೀಡಿದ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಅವರು ಶಾಸಕ ಯಶಪಾಲ್ ಸುವರ್ಣ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದರು.

ವಿಳAಬವಿಲ್ಲದೆ ಎಫ್‌ಐಆರ್ ದಾಖಲಿಸುವ ಮೂಲಕ ಇನ್ನು ಮುಂದೆ ಈ ರೀತಿಯ ಪ್ರಕರಣಗಳು ನಡೆಯದಂತೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ದೂರು ನೀಡುವ ಸಂದರ್ಭ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷ ಮೋಹನ್ ಮೌರ್ಯ, ಮಡಿಕೇರಿ ಬ್ಲಾಕ್ ಪ್ರಚಾರ ಸಮಿತಿಯ ಅಧ್ಯಕ್ಷ ವಿ.ಜಿ.ಮೋಹನ್ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ ಹಾಜರಿದ್ದರು.