ಮಡಿಕೇರಿ, ಜು. ೩೧: ಜು. ೨೯ ರಂದು ಜಂಬೂರಿನ ಖಾಸಗಿ ತೋಟದಲ್ಲಿ ಗಾಳಿ-ಮಳೆಯಿಂದ ಮರ ಬಿದ್ದು ಇಬ್ಬರು ಕಾರ್ಮಿಕರು ದುರ್ಮರಣಕ್ಕೆ ಈಡಾದ ಸ್ಥಳಕ್ಕೆ ಸೋಮವಾರಪೇಟೆ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕರಾದ ಶಶಿಧರ್ ಎಸ್ ಹಾಗೂ ಪ್ರಬಾರ ಕಾರ್ಮಿಕ ಅಧಿಕಾರಿಗಳಾದ ಎಂ.ಎA ಯತ್ನಟ್ಟಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಆರ್ ಶೀರಾಜ್ ಅಹ್ಮದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿವಿಧ ಕಾರ್ಮಿಕ ಕಾಯ್ದೆಗಳಡಿ ತಪಾಸಣೆ ಮಾಡಿ ಮೃತ ಕಾರ್ಮಿಕರಿಗೆ ಮತ್ತು ತೀವ್ರತರ ಗಾಯಗೊಂಡಿರುವ ಕಾರ್ಮಿಕರಿಗೆ ಸೂಕ್ತ ಪರಿಹಾರವನ್ನು ಒದಗಿಸಬೇಕೆಂದು ತೋಟದ ಆಡಳಿತ ಮಂಡಳಿಗೆ ನಿರ್ದೇಶನ ನೀಡಿದರು. ಈಗಾಗಲೇ ಮೃತರ ಕುಟುಂಬಗಳಿಗೆ ತಲಾ ರೂ.೫ ಲಕ್ಷ ಕೊಡಲು ಮಂಜೂರಾತಿಗಾಗಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಸ್ಥಳದಲ್ಲಿದ್ದ ಆಡಳಿತ ಸಿಬ್ಬಂದಿ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ತದನಂತರ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಕಾರ್ಮಿಕರನ್ನು ಭೇಟಿಯಾಗಿ ಅವರ ಆರೋಗ್ಯವನ್ನು ವಿಚಾರಿಸಿದರು. ತೋಟದ ಮುಖ್ಯಸ್ಥರು ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಾಗಿ ತಿಳಿಸಲಾಗಿದೆ ಎಂದು ಗಾಯಾಳು ಕಾರ್ಮಿಕರಿಗೆ ಮತ್ತು ಅವರ ಸಂಬAಧಿಕರಿಗೆ ತಿಳಿಸಿ, ತೊಂದರೆಗಳಾದಲ್ಲಿ ಕಾರ್ಮಿಕ ಇಲಾಖೆಗೆ ಮಾಹಿತಿ ನೀಡುವಂತೆ ಹೇಳಿದರು.