ಮಡಿಕೇರಿ, ಜು. ೩೧: ಕೊಡಗು ಜಿಲ್ಲಾ ಡೆಕೋರೇಶನ್, ಶಾಮಿಯಾನ, ಲೈಟಿಂಗ್ಸ್ ಮತ್ತು ಸೌಂಡ್ಸ್ ಮಾಲೀಕರ ಸಂಘದ ಉದ್ಘಾಟನೆ ಹಾಗೂ ನೂತನ ಲಾಂಛನ ಅನಾವರಣ ಕಾರ್ಯಕ್ರಮ ತಾ. ೫ ರಂದು ತಾಳತ್‌ಮನೆಯ ಸ್ವಾಗತ್ ಕನ್ವೆನ್ಷನ್ ಸಭಾಂಗಣದಲ್ಲಿ ನಡೆಯಲಿದೆ.

ಬೆಳಿಗ್ಗೆ ೧೧.೩೦ಕ್ಕೆ ಸಂಘದ ಅಧ್ಯಕ್ಷ ಅಜ್ಜೇಟಿರ ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸುವರು. ಶಾಸಕ ಎ.ಎಸ್. ಪೊನ್ನಣ್ಣ ಲಾಂಛನ ಬಿಡುಗಡೆ ಮಾಡುವರು. ಅತಿಥಿಗಳಾಗಿ ಸಂಸದ ಯದುವೀರ್ ಒಡೆಯರ್, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಜಿಲ್ಲಾಧಿಕಾರಿ ಎಸ್.ಜೆ. ಸೊಮಶೇಖರ್, ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ, ರಾಜ್ಯ ಶಾಮಿಯಾನ ಧ್ವನಿ ಬೆಳಕು ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಬ್ದುಲ್ ಕರೀಂ ಅತ್ತಾರ್, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ನಾಗೇಂದ್ರ ಪ್ರಸಾದ್, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಎಚ್.ಟಿ., ಡೆಕೋರೇರ‍್ಸ್ ಸಂಘದ ಪ್ರಧಾನ ಕಾರ್ಯದರ್ಶಿ ಅವಿನ್‌ಕುಮಾರ್, ಖಜಾಂಚಿ ಹೆಚ್.ಪಿ. ಲೋಕೇಶ್ ಪಾಲ್ಗೊಳ್ಳಲಿದ್ದಾರೆ.