ಮಡಿಕೇರಿ ಜು.೩೧: ಜಿಲ್ಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ೩,೩೯೫ ಪೊಲೀಸ್ ಕಾನ್ಸೆ÷್ಟÃಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಆಗಸ್ಟ್ ೨ ರಂದು ಪರೀಕ್ಷೆ ನಡೆಯಲಿದೆ.
ಜಿಲ್ಲೆಯಲ್ಲಿ ಆಗಸ್ಟ್ ೨ ರಂದು ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ವಿಭಾಗ, ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಸಂತ ಜೋಸೆಫರ ಕಾನ್ವೆಂಟ್ ಸಂಯುಕ್ತ ಪದವಿ ಪೂರ್ವ ಕಾಲೇಜು ಈ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಲಿಖಿತ ಪರೀಕ್ಷೆಯನ್ನು ಸುಗಮವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್)-೨೦೨೩ರ ಕಲಂ ೧೬೩ ರಡಿ ಪ್ರದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅವರು ಆದೇಶಿಸಿದ್ದಾರೆ. ಈ ವ್ಯಾಪ್ತಿಯಲ್ಲಿರುವ ಎಲ್ಲಾ ಜೆರಾಕ್ಸ್ ಅಂಗಡಿಗಳು ಹಾಗೂ ಸೈಬರ್ ಸೆಂಟರ್ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ನಿಷೇಧಾಜ್ಞೆಯು ಆಗಸ್ಟ್ ೨ ರಂದು ಬೆಳಗ್ಗೆ ೧೦ ಗಂಟೆಯಿAದ ಸಂಜೆ ೫.೩೦ ಗಂಟೆಯವರೆಗೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.
ಗಣಕಯಂತ್ರ ಶಿಕ್ಷಣ ಪರೀಕ್ಷೆ
೨೦೨೬ನೇ ಸಾಲಿನ ಗಣಕಯಂತ್ರ ಶಿಕ್ಷಣ ಪರೀಕ್ಷೆಯು ಆಗಸ್ಟ್, ೩ ರಿಂದ ೫ ರವರೆಗೆ ಮಡಿಕೇರಿಯ ಶ್ರೀನಿಕೇತನದಲ್ಲಿರುವ ಶ್ರೀ ಸದ್ಗುರು ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಈ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಪರೀಕ್ಷೆಯನ್ನು ಸುಗಮವಾಗಿ ನಡೆಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ೨೦೨೩ ರ ಕಲಂ ೧೬೩ ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರದ ಸುತ್ತಲೂ ೨೦೦ ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.
ಈ ವ್ಯಾಪ್ತಿಯಲ್ಲಿ ಎಲ್ಲಾ ಜೆರಾಕ್ಸ್ ಅಂಗಡಿ ಮತ್ತು ಸೈಬರ್ ಸೆಂಟರ್ಗಳನ್ನು ಮುಚ್ಚಿಸುವಂತೆ ಸಹ ತಿಳಿಸಿದೆ. ಈ ಆದೇಶವು ಪರೀಕ್ಷಾ ದಿನಗಳಂದು ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೫.೩೦ ಗಂಟೆಯವರೆಗೆ ಮಾತ್ರ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.