ಮಡಿಕೇರಿ, ಜು. ೩೧: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಮಡಿಕೇರಿ ತಾಲೂಕು ಅಧ್ಯಕ್ಷ ಎಂ.ಜಿ. ಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ತಾಲೂಕು ಗ್ಯಾರಂಟಿ ಸಮಿತಿ ಸಭೆ ನಡೆಯಿತು.

ಶಿಶುಅಭಿವೃದ್ದಿ ಇಲಾಖೆಯಲ್ಲಿ ಗೃಹಲಕ್ಷಿö್ಮ ಯೋಜನೆಯಡಿ ಮೇ ಮಾಹೆಯಲ್ಲಿ ೧,೦೫,೩೯೨ ಫಲಾನುಭವಿಗಳಿಗೆ ಒಟ್ಟು ರೂ. ೨,೧೦,೭೮,೪೦೦ ಹಣ ಬಿಡುಗಡೆಯಾಗಿದ್ದು ಗೃಹಲಕ್ಷಿö್ಮ ಯೋಜನೆಯಡಿ ಮರಣ ಹೊಂದಿದ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾಗಿರುವ ಧನಸಹಾಯದ ಮೊತ್ತವನ್ನು ಬ್ಯಾಂಕ್ ಖಾತೆಯಿಂದ ಸರ್ಕಾರದ ಖಾತೆಗೆ ಜಮೆ ಮಾಡುವ ಕುರಿತು ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಬಿಎಲ್‌ಬಿಸಿ ಸಭೆ ಏರ್ಪಡಿಸಲಾಗಿದ್ದಾಗಿ ಮೋಹನ್ ಅವರು ಈ ಸಂದರ್ಭ ಮಾಹಿತಿ ಒದಗಿಸಿದರು.

ಆ ಸಭೆಯಲ್ಲಿ, ಮಡಿಕೇರಿ ತಾಲೂಕಿನಲ್ಲಿ ಒಟ್ಟು ೭೧೧ ಗೃಹಲಕ್ಷಿö್ಮ ಫಲಾನುಭವಿಗಳು ಮರಣ ಹೊಂದಿರುವ ಮಾಹಿತಿ ಲಭ್ಯವಾಗಿದ್ದು, ಲೀಡ್ ಬ್ಯಾಂಕ್ ಮ್ಯಾನೇಜರ್ ಗಂಗಾಧರ ನಾಯಕ್ ಅವರು ಪ್ರತಿ ಮರಣ ಫಲಾನುಭವಿಯ ಬ್ಯಾಂಕ್ ಖಾತೆಯ ಐಎಫ್‌ಎಸ್‌ಸಿ ಕೋಡ್ ನೀಡುವಂತೆ ತಿಳಿಸಿದ್ದರು. ಅದರಂತೆ ಆಹಾರ ಶಾಖೆಯವರಿಗೆ ಪತ್ರ ಮುಖೇನ ಗ್ರಾಮವಾರು ಮಾಹಿತಿ ಕೇಳಿದ್ದು, ಮಾಹಿತಿ ಪಡೆದ ನಂತರ ಐಎಫ್‌ಎಸ್‌ಸಿ ಕೋಡ್ ಮಾಹಿತಿಯನ್ನು ಕಲೆ ಹಾಕಿ ಲೀಡ್ ಬ್ಯಾಂಕ್ ಅವರಿಗೆ ಮುಂದಿನ ಕ್ರಮಕ್ಕಾಗಿ ಮಾಹಿತಿ ನೀಡಲಾಗುವುದು ಎಂದು ಮೋಹನ್ ಅವರು ತಿಳಿಸಿದರು.

ಹಾಗೂ ಮಡಿಕೇರಿ ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಿAದ ಮರಣ ದೃಢೀಕರಣ ವಿತರಿಸುವ ಬಗ್ಗೆ ಪ್ರತಿ ತಿಂಗಳು ಮಾಹಿತಿ ಪಡೆದು ಪರಿಶೀಲಿಸಿ ಗೃಹಲಕ್ಷಿö್ಮ ಫಲಾನುಭವಿ ಮರಣ ಹೊಂದಿದ್ದರೆ ಇವರ ಮರಣ ದೃಢೀಕರಣ ಪತ್ರ, ಆಧಾರ್ ಕಾರ್ಡ್ ಪಡೆದುಕೊಂಡು ಮರಣ ಹೊಂದಿದವರ ಬ್ಯಾಂಕ್ ಖಾತೆಗೆ ಗೃಹಲಕ್ಷಿö್ಮ ಯೋಜನೆಯ ಹಣ ಜಮೆಯಾಗುವುದನ್ನು ಸ್ಥಗಿತಗೊಳಿಸಿ, ಈ ಕುಟುಂಬದ ಅರ್ಹ ಮಹಿಳಾ ಸದಸ್ಯರು ಇದ್ದಲ್ಲಿ ಗೃಹಲಕ್ಷಿö್ಮ ಯೋಜನೆಗೆ ಅರ್ಜಿ ಸಲ್ಲಿಸಲು ಕ್ರಮವಹಿಸುವಂತೆ ತಿಳಿಸಿದ್ದು ಅದರಂತೆ ಗೂಗಲ್ ಶೀಟ್ ರಚಿಸಿದ್ದು ಪ್ರತಿ ಗ್ರಾಮ ಪಂಚಾಯಿತಿಯವರಿAದ ಮಾಹಿತಿ ಪಡೆಯಲಾಗುತ್ತಿದೆ ಎಂದು ಮೋಹನ್ ಅವರು ಮಾಹಿತಿ ನೀಡಿದರು.

ಶಕ್ತಿ ಯೋಜನೆಯಲ್ಲಿ ಒಟ್ಟು ೧,೮೫,೧೪,೫೦೪ ವಯಸ್ಕ ಮಹಿಳಾ ಪ್ರಯಾಣಿಕರು ಮತ್ತು ೪,೫೪,೧೦೩ ಹೆಣ್ಣು ಮಕ್ಕಳು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿನಿಯರು ಸಂಸ್ಥೆಯ ವಾಹನದಲ್ಲಿ ಪ್ರಯಾಣಿಸಿ ಸದರಿ ಯೋಜನೆ ಪಡೆದುಕೊಂಡಿದ್ದಾರೆ, ಸರಾಸರಿ ೧೬,೭೪೭ ಪ್ರಯಾಣಿಕರು ಒಂದು ದಿನಕ್ಕೆ ಸಂಸ್ಥೆಯ ವಾಹನದಲ್ಲಿ ಪ್ರಯಾಣಿಸಿದ್ದು ಶಕ್ತಿ ಯೋಜನೆಯಿಂದ ೨೧/೦೭/೨೦೨೬ ರ ವರೆಗೆ ಒಟ್ಟು ೮೧,೬೮,೮೨,೧೩೧ ರೂ. ಸಂಸ್ಥೆಗೆ ಆದಾಯ ಬಂದಿರುತ್ತದೆ ಎಂದು ಇಲಾಖೆಯ ಸಿಬ್ಬಂದಿ ಸಭೆಗೆ ಮಾಹಿತಿ ನೀಡಿದರು.

ಯುವನಿಧಿ ಯೋಜನೆಗೆ ಸಂಬAಧಿಸಿದAತೆ ೨೦೨೪,೨೦೨೫ ಮತ್ತು ೨೦೨೬ ರಲ್ಲಿ ಪದವಿ ಮತ್ತು ಡಿಪ್ಲೋಮಾ ಉತ್ತೀರ್ಣರಾಗಿ ಕನಿಷ್ಟ ೬ ತಿಂಗಳ ಅವಧಿಯವರೆಗೆ ಸರ್ಕಾರಿ/ ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಅಲ್ಲದೆ ಈ ಯೋಜನೆಯ ಪ್ರಯೋಜನ ಮುಂದುವರಿಸಬೇಕಿದ್ದಲ್ಲಿ ಪ್ರತಿ ತಿಂಗಳ ೨೫ನೇ ತಾರೀಖಿನೊಳಗೆ ಸ್ವಯಂ ಘೋಷಣೆ ಮಾಡಬೇಕು, ನಿರುದ್ಯೋಗಿಗಳು ಸ್ವಯಂ ದೃಢೀಕರಣ ನೀಡಿದ್ದಲ್ಲಿ ಮಾತ್ರ ಡಿಬಿಟಿ ಮೂಲಕ ನಿರುದ್ಯೋಗ ಭತ್ಯೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಇಲಾಖಾ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.

ಗೃಹಜ್ಯೋತಿ ಯೋಜನೆ ಬಗ್ಗೆ ಇಲಾಖಾಧಿಕಾರಿ ಅವರು ಮಾತನಾಡಿ, ಮಡಿಕೇರಿ ತಾಲೂಕಿನಲ್ಲಿ ೫೨,೭೧೩ ಅರ್ಹ ವಿದ್ಯುತ್ ಸ್ಥಾವರಗಳಿದ್ದು, ಗೃಹಜ್ಯೋತಿ ಯೋಜನೆಯಡಿ ೫೨,೧೨೧ ನೋಂದಣಿಗೊAಡ ಅರ್ಜಿಗಳಾಗಿದ್ದು, ೫೯೨ ಸ್ಥಾವರಗಳು ಬಾಕಿ ಇದ್ದು, ಶೇ. ೯೮.೮೮ ಶೇಕಡವಾರು ಪ್ರಗತಿಯಾಗಿದ್ದು ಮೇ-೨೦೨೬ ಹಾಗೂ ಜೂನ್-೨೦೨೬ ಮಾಹೆಗಳಲ್ಲಿ ೧,೩೧೦ ಸ್ಥಾವರಗಳು ಹೊಸದಾಗಿ ಸಂಪರ್ಕಗೊAಡಿದೆ ಎಂದರು. ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಮಾಡುವ ಕಾರ್ಯ ಪ್ರಗತಿಯಲ್ಲಿದ್ದು, ಇದುವರೆಗೆ ೧೭,೨೫೦ ಫಲಾನುಭವಿಗಳ ಪುನರ್ ಪರಿಶೀಲನೆ ಮುಗಿದಿದೆ ಎಂದರು.

ಅನ್ನಭಾಗ್ಯ ಯೋಜನೆಗೆ ಸಂಬAಧಿಸಿದAತೆ ಮಡಿಕೇರಿ ತಾಲೂಕಿನಲ್ಲಿ ಪತ್ತೆ ಹಚ್ಚಿರುವ ಅನರ್ಹ ಫಲಾನುಭವಿಗಳ ಸಂಖ್ಯೆ ೧೩೮೮ ಆಗಿದೆ ಹಾಗೂ ಪ್ರಸ್ತುತ ಆಹಾರ ಇಲಾಖೆಯಲ್ಲಿ ಹೊಸಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವುದನ್ನು ಸ್ಥಗಿತಗೊಳಿಸಲಾಗಿದ್ದು, ಆಸ್ಷತ್ರೆ ಚಿಕಿತ್ಸೆಗಾಗಿ ಹೊಸಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಮತ್ತು ಈಗಾಗಲೇ ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ ಸದಸ್ಯರ ಹೆಸರು ಸೇರ್ಪಡೆ ಮಾಡುವ/ ವರ್ಗಾವಣೆ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಸಭೆಗೆ ಅಧಿಕಾರಿ ಮಾಹಿತಿ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹೊಂದಿರುವ ಬಿ.ಪಿ.ಎಲ್ ಪಡಿತರ ಚೀಟಿಗೆ ಪರಿಶಿಷ್ಟರ ಜಾತಿ ಪ್ರಮಾಣ ಪತ್ರವನ್ನು ಮ್ಯಾಪಿಂಗ್ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಜಾತಿ ಪ್ರಮಾಣ ಪತ್ರ ಮ್ಯಾಪಿಂಗ್ ಮಾಡುವುದಕ್ಕೆ ಹಾಗೂ ಅನ್ನಭಾಗ್ಯ ಯೋಜನೆಗೆ ಯಾವುದೇ ರೀತಿಯ ಸಂಬAಧವಿರುವುದಿಲ್ಲ, ಅನ್ನಭಾಗ್ಯ ಯೋಜನೆಯ ಫಲಾನುಭವಿಗಳು ಇದರ ಬಗ್ಗೆ ಗೊಂದಲಕ್ಕೀಡಾಗುವ ಅವಶ್ಯತೆ ಇಲ್ಲ ಎಂದು ಸಭೆಯಲ್ಲಿ ಮಾಹಿತಿ ನೀಡಿದರು.