ಕಡಂಗ, ಆ. ೩: ವೀರಾಜಪೇಟೆ ತಾಲೂಕಿನ ಅರಮೇರಿ ಚಾಮಿಯಲ ಗ್ರಾಮದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಭಯ ಭೀತರಾಗಿದ್ದಾರೆ. ಗ್ರಾಮಸ್ಥರ ತೋಟಗಳಿಗೆ ನುಗ್ಗಿ ಅಡಿಕೆ, ಬಾಳೆ, ಕಾಫಿ ಗಿಡಗಳನ್ನು ನಾಶಪಡಿಸುತ್ತಿದ್ದು, ರೈತರು ಕಂಗಾಲಾಗಿದ್ದಾರೆ.
ಭಾನುವಾರ ಮಧ್ಯಾಹ್ನ ಕಾಡಾನೆಗಳು ಗ್ರಾಮದಲ್ಲಿ ಇರುವುದಾಗಿ ಸ್ಥಳೀಯರಾದ ಸೈಫುದ್ದಿನ್ ಅವರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ತಕ್ಷಣ ಅಧಿಕಾರಿಗಳು ಭೇಟಿ ನೀಡಿ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡರು.