ಸುAಟಿಕೊಪ್ಪ, ಆ. ೩: ಯುವಜನತೆಯು ದುಶ್ಚಟಗಳ ದಾಸತ್ವಕ್ಕೆ ಮಾರುಹೋಗದೆ ಅವುಗಳ ವಿರುದ್ಧ ಹೋರಾಟ ನಡೆಸಿದರೆ ಮಾತ್ರ ಅವುಗಳನ್ನು ನಿರ್ಮೂಲನೆಗೊಳಿಸಬಹುದು ಎಂದು ಸುಂಟಿಕೊಪ್ಪ ಪೊಲೀಸ್ ಠಾಣೆಯ ಎ.ಎಸ್.ಐ. ಅನಂತ್ಕಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ ಟ್ರಸ್ಟ್-ಸುಂಟಿಕೊಪ್ಪ ವಲಯದ ವತಿಯಿಂದ ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥö್ಯ ಸಂಕಲ್ಪ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅನಂತಕುಮಾರ್ ಅವರು, ಮಾದಕ ವಸ್ತುಗಳ ಸೇವನೆ ಮತ್ತು ಬಳಕೆಯಿಂದ ಸಾಕಷ್ಟು ಪ್ರಮಾಣದಲ್ಲಿ ಅನಾಹುತಗಳು ಸಮಾಜಕ್ಕೆ ಮಾರಕವಾಗುತ್ತಿವೆ. ಯುವಜನತೆಯು ಅದರ ದಾಸತ್ವಕ್ಕೆ ತುತ್ತಾಗಬಾರದು. ಮಕ್ಕಳು, ಅಪರಿಚಿತರು ನೀಡುವ ವಸ್ತುಗಳನ್ನು ಸ್ವೀಕರಿಸಬಾರದು, ಸೇವಿಸಬಾರದು. ಡ್ರಗ್ಸ್ ಸೇವಿಸುವುದು ಅಥವಾ ಮಾರಾಟ ಮಾಡುವುದು ಕಂಡು ಬಂದಲ್ಲಿ ಕಾನೂನು ಪ್ರಕಾರ ಕಠಿಣ ಜೈಲು ಶಿಕ್ಷೆಯಾಗುತ್ತದೆ. ಈ ಬಗ್ಗೆ ಎಚ್ಚರದಿಂದಿರಬೇಕೆAದರು.
ಕಾರ್ಯಕ್ರಮವನ್ನು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ. ಲೋಕೇಶ್ ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿ ಮದ್ಯಪಾನ, ಧೂಮಪಾನ, ಮಾದಕ ವಸ್ತು, ಗುಟ್ಕಾ, ಡ್ರಗ್ಸ್ ಇವುಗಳ ಸೇವನೆಯಿಂದ ಆಗುವ ದುಷ್ಪರಿಣಾಮ ಬಗ್ಗೆ ಜಾಗೃತಿ ಮೂಡಿಸಬೇಕೆಂದರು.
ಮುಖ್ಯ ಅತಿಥಿಗಳಾದ ಮಡಿಕೇರಿ ತಾಲೂಕು ಶ್ರೀ.ಕ್ಷೇ.ಧ.ಯೋ. ಯೋಜನಾಧಿಕಾರಿಗಳಾದ ಯು.ಪುರುಷೋತ್ತಮ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪೂಜ್ಯರ ಮಾರ್ಗದರ್ಶನದಲ್ಲಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದು, ಅದರಲ್ಲಿ ವಿದ್ಯಾರ್ಥಿಗಳ ಸ್ವಸ್ಥ ಜೀವನಕ್ಕೋಸ್ಕರ ಸ್ವಾಸ್ಥö್ಯ ಸಂಕಲ್ಪ ಎನ್ನುವ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಮಾಡಲಾಗುತ್ತಿದೆ ಎಂದರು.
ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಡಿ.ನರಸಿಂಹ ಅವರು ಮಾತನಾಡಿ ಮಕ್ಕಳು ಒಳ್ಳೆಯ ವಿದ್ಯೆ ಕಲಿತು ತಂದೆ ತಾಯಂದಿರಿಗೆ ಉತ್ತಮ ಹೆಸರು ತಂದುಕೊಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಭಾರ ಮುಖ್ಯ ಶಿಕ್ಷಕಿ ಚಿತ್ರ ಪ್ರತಿಯೊಂದು ಕಾರ್ಯಕ್ರಮಗಳನ್ನು ಸದುಪಯೋಗಪಡಿಸಿಕೊಳ್ಳಲು ಮಕ್ಕಳಿಗೆ ತಿಳಿಸಿದರು.
ಪೊಲೀಸ್ ಸಿಬ್ಬಂದಿ ರಮೇಶ್, ಉಕ್ಕಡದ ಕಾರ್ಯದರ್ಶಿ ಸರಸ್ವತಿ, ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ವಲಯದ ಮೇಲ್ವಿಚಾರಕರಾದ ಸಂತೋಷ್ ನಾಯ್ಕ್ ನಿರೂಪಿಸಿ, ಸೇವಾ ಪ್ರತಿನಿಧಿ ಚಿತ್ರ ಸ್ವಾಗತಿಸಿ, ಸೇವಾ ಪ್ರತಿನಿಧಿ ಯಶೋಧ ವಂದಿಸಿದರು.