ಸೋಮವಾರಪೇಟೆ, ಆ. ೩: ಮೈಸೂರಿನ ತನುಮನ ಸಂಸ್ಥೆಯ ಆಶ್ರಯದಲ್ಲಿ ನಡೆದ ಜಗ ನಡೆಯಲಿ ಬುದ್ದನ ಕಡೆಗೆ ಸಂಗೀತ ಕಾರ್ಯಕ್ರಮದಲ್ಲಿ ಜಿಲ್ಲೆಯ ದಲಿತ ಸಂಘರ್ಷ ಸಮಿತಿಯ ಹಿರಿಯ ಮುಖಂಡ ಜಯಪ್ಪ ಹಾನಗಲ್ಲು ಸೇರಿದಂತೆ ಇತರ ನಾಲ್ವರಿಗೆ ಬುದ್ಧ ನಾಡ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಕಲಾವಿದ ಚಿಕ್ಕಜವರಪ್ಪ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್ ಎನ್. ಛಲವಾದಿ ಉಪಸ್ಥಿತರಿದ್ದು, ಪ್ರಶಸ್ತಿ ಪ್ರದಾನ ಮಾಡಿದರು. ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಜಿ.ಪಂ. ಮಾಜಿ ಸದಸ್ಯ ಅಚ್ಯುತ್ತಾನಂದ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ದ್ಯಾವಪ್ಪ, ರಾಹುಲ್ ರಾಮ್ ಸೇರಿದಂತೆ ಇತರರು ಇದ್ದರು.