ಮಡಿಕೇರಿ, ಆ. ೩: ೨೦೨೬-೨೭ನೇ ಶೈಕ್ಷಣಿಕ ವರ್ಷಕ್ಕೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಆನ್ಲೈನ್ ಲಿಂಕ್ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ/Sevಚಿsiಟಿಜhu/ ಆeಠಿಚಿಡಿಣmeಟಿಣSeಡಿviಛಿes ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ ೩೧ ಕೊನೆಯ ದಿನವಾಗಿದೆ.
ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, ಅಭ್ಯರ್ಥಿಯು ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಜೈನ್ ಬೌದ್ದ, ಸಿಖ್ ಮತ್ತು ಪಾರ್ಸಿ ಸೇರಿದವರಾಗಿರಬೇಕು, ಪೂರ್ಣಕಾಲಿಕ ಸ್ನಾತಕೋತ್ತರ ಪದವಿ ಕೋರ್ಸ್ ಇದಾಗಿದ್ದು, ವಿದ್ಯಾರ್ಥಿಯ ಗರಿಷ್ಠ ವಯೋಮಿತಿ ೪೦ ವರ್ಷ ಮೀರಿರಬಾರದು, ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಒಟ್ಟು ಆದಾಯವು ರೂ.೧೬ ಲಕ್ಷಗಳು ಮೀರಬಾರದು, ವಿದ್ಯಾರ್ಥಿಯು ವ್ಯಾಸಂಗ ಮಾಡುತ್ತಿರುವ ವಿದೇಶಿ ವಿಶ್ವವಿದ್ಯಾಲಯವು ಕಿS ಖಿoಠಿ ೫೦೦ Uಟಿiveಡಿsiಣಥಿ ಖಚಿಟಿಞiಟಿg ಪಟ್ಟಿಯಲ್ಲಿ ಸ್ಥಾನ ಪಡೆದಿರಬೇಕು, ಸ್ನಾತಕೋತ್ತರ ವೈದ್ಯಕೀಯ ಹಾಗೂ ಕಾನೂನು ಪದವಿ ಕೋರ್ಸುಗಳಿಗೆ ಮಾತ್ರ ಕಿS ಖಿoಠಿ ೧೦೦ ಸಬ್ಜೆಕ್ಟ್ ವೈಸ್ ರ್ಯಾಂಕಿAಗ್ ಸಹ ಪರಿಗಣಿಸಲಾಗುವುದು, ವಿದ್ಯಾರ್ಥಿ ವೇತನ ಪಡೆಯಲು ಎನ್ಪಿಸಿಐ ಆಕ್ಟಿವ್ ಸ್ಟೆಟಸ್ ಬ್ಯಾಂಕ್ನೊAದಿಗೆ ಆಧಾರ್ ಜೋಡಣೆ ಮಾಡಿಸುವುದು ಕಡ್ಡಾಯವಾಗಿದೆ.
ವಿದೇಶಿ ವಿದ್ಯಾರ್ಥಿ ವೇತನ ಯೋಜನೆಯ ಪ್ರಕ್ರಿಯೆಯು ಸರ್ಕಾರಿ ಆದೇಶದಲ್ಲಿನ ಇತರೆ ಷರತ್ತುಗಳಿಗೊಳಪಟ್ಟಿರುತ್ತದೆ. ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಆದೇಶ ಹಾಗೂ ಷರತ್ತಿಗೊಳಪಟ್ಟು ಯಾವುದೇ ಅಂಶಗಳನ್ನು ಮಾರ್ಪಾಡು ಮಾಡುವ ಅಧಿಕಾರವನ್ನು ಸರ್ಕಾರ ಹೊಂದಿರುತ್ತದೆ.
ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ: ೦೮೨೭೨-೨೨೫೫೨೮/ ೨೨೦೨೧೪, ತಾಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ : ೮೫೪೮೦೬೮೫೧೯, ತಾಲೂಕು ಮಾಹಿತಿ ಕೇಂದ್ರ ವೀರಾಜಪೇಟೆ : ೯೯೦೦೭೩೧೦೩೭, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ.ಕಾಲೇಜು ಹತ್ತಿರ, ಮಡಿಕೇರಿ: ೯೯೭೨೭೯೯೦೯೧ ಸಂಪರ್ಕಿಸಬಹುದು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ೧ ಪ್ರತಿ ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ, ನಂ-೧೬ ಸಿ, ಮೌಲಾನಾ ಅಬುಲ್ ಕಲಾಂ ಆಜಾದ್ ಭವನ, ಮಿಲ್ಲರ್ ಟ್ಯಾಂಕ್ ಬೆಡ್ರಸ್ತೆ, ವಸಂತನಗರ, ಬೆಂಗಳೂರು-೫೬೦೦೫೨ ಇಲ್ಲಿಗೆ ನಿಗಧಿಪಡಿಸಿದ ದಿನಾಂಕದAದು ಸಲ್ಲಿಸಬೇಕು. ಹಾರ್ಡ್ಕಾಪಿ ಸಲ್ಲಿಸುವ ದಿನಾಂಕವನ್ನು ನಂತರ ಇ-ಮೇಲ್ ಮೂಲಕ ತಿಳಿಸಲಾಗುವುದು. ಆನ್ಲೈನ್ ಅರ್ಜಿಯನ್ನು ಭರ್ತಿ ಮಾಡುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.iಟಿ/ ವೆಬ್ಸೈಟ್ಗೆ ಭೇಟಿ ನೀಡಬಹುದಾಗಿರುತ್ತದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಿ.ಎಸ್. ಸಚಿನ್ ತಿಳಿಸಿದ್ದಾರೆ.