ಸೋಮವಾರಪೇಟೆ, ಆ. ೩: ಸಿ ಮತ್ತು ಡಿ ವರ್ಗದ ಭೂಮಿ ವಿವಾದಕ್ಕೆ ಸಂಬAಧಿಸಿದAತೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ಅಧ್ಯಯನ ಸಮಿತಿಯ ಸದಸ್ಯರು ಸೋಮವಾರಪೇಟೆ ತಾಲೂಕಿನ ವಿವಿಧ ಗ್ರಾಮಗಳಿಗೆ ಖುದ್ದು ಭೇಟಿ ನೀಡಿ, ವಾಸ್ತವಾಂಶಗಳನ್ನು ಪರಿಶೀಲಿಸಿದರು.

ರೈತರು ಈಗಾಗಲೇ ಕೃಷಿ ಮಾಡಿಕೊಂಡು ಜೀವನ ಕಂಡುಕೊAಡಿರುವ ಭೂಮಿಯನ್ನು ಸರ್ಕಾರಿ ದಾಖಲೆಗಳಲ್ಲಿ ಸಿ ಮತ್ತು ಡಿ ವರ್ಗದ ಜಮೀನು (ವ್ಯವಸಾಯಕ್ಕೆ ಯೋಗ್ಯವಲ್ಲದ ಜಾಗ) ಎಂದು ನಮೂದಿಸಿರುವುದೂ ಅಲ್ಲದೇ, ಈ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ. ಈ ಭೂಮಿಗೆ ಸಂಬAಧಿಸಿದAತೆ ಉದ್ಭವಿಸಿರುವ ಸಮಸ್ಯೆ ಬಗ್ಗೆ ವಾಸ್ತವ ಸ್ಥಿತಿಗತಿಗಳನ್ನು ಅಧ್ಯಯನ ಮಾಡಲು ಸರ್ಕಾರ ನಾಲ್ವರು ನಿವೃತ್ತ ಅಧಿಕಾರಿಗಳನ್ನು ನಿಯೋಜಿಸಿ ಸಮಿತಿ ರಚಿಸಿದ್ದು, ಸಮಿತಿಯ ಸದಸ್ಯರುಗಳು ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಸೋಮವಾರಪೇಟೆ ತಾಲೂಕಿಗೆ ಸಂಬAಧಿಸಿದAತೆ ರೈತ ಮುಖಂಡರ ಸಭೆ ನಡೆಸಿ, ಗ್ರಾಮವಾರು ಅಧ್ಯಯನ ನಡೆಸಿತು. ಸಮಿತಿಯ ಸದಸ್ಯರುಗಳಾದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಭಾನುಪ್ರಕಾಶ್, ನಿವೃತ್ತ ತಹSiÃಲ್ದಾರ್ ಜಯರಾಂ, ನಿವೃತ್ತ ಡಿಸಿಎಫ್ ಪೂವಯ್ಯ ಅವರುಗಳು ಹರಗ, ಕೊತ್ನಳ್ಳಿ, ಶಾಂತಳ್ಳಿ, ಕುಮಾರಳ್ಳಿ,ಕೂತಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈಗಾಗಲೇ ಸರ್ಕಾರದ ದಾಖಲೆಗಳಲ್ಲಿ ನಮೂದಾಗಿರುವ ವ್ಯವಸಾಯಕ್ಕೆ ಯೋಗ್ಯವಲ್ಲದ (ಸಿ ಮತ್ತು ಡಿ) ಭೂಮಿಯಲ್ಲಿ ರೈತರು ಹತ್ತಾರು ವರ್ಷಗಳಿಂದ ಕೃಷಿ ಮಾಡಿಕೊಂಡಿರುವುದು, ಕಾಫಿ, ಏಲಕ್ಕಿ ಸೇರಿದಂತೆ ಸಾವಿರಾರು ಮರಗಳನ್ನು ನೆಟ್ಟು ಬೆಳೆಸಿರುವುದನ್ನು ಸ್ಥಳೀಯ ರೈತ ಮುಖಂಡರು ಸಮಿತಿಯ ಸದಸ್ಯರಿಗೆ ಮನವರಿಕೆ ಮಾಡಿಕೊಟ್ಟರು.

ರೈತರ ಅಭಿಪ್ರಾಯಗಳನ್ನು ಆಲಿಸಿದ ಸಮಿತಿ ಸದಸ್ಯರು, ಸರ್ಕಾರದ ದಾಖಲೆಗಳು, ವಸ್ತು ಸ್ಥಿತಿಯ ಅಧ್ಯಯನ ಸೇರಿದಂತೆ ವಾಸ್ತವಾಂಶದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು. ಇದರೊಂದಿಗೆ ಮುಂದಿನ ದಿನಗಳಲ್ಲಿ ಸಿ ಮತ್ತು ಡಿ ವರ್ಗದ ಜಮೀನು ಎಂದು ನಮೂದಾಗಿರುವ ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭ ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿರುವ ಜಿಲ್ಲಾ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ತಾಲೂಕು ತಹಶೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ, ಎ.ಸಿ.ಎಫ್. ನವೀನ್, ಆರ್‌ಎಫ್‌ಓ ಮಲ್ಲೇಶ್, ತಾಲೂಕು ರೈತ ಹೋರಾಟ ಸಮಿತಿಯ ಅಧ್ಯಕ್ಷ ಸುರೇಶ್ ಚಕ್ರವರ್ತಿ, ರೈತ ಸಂಘದ ಅಧ್ಯಕ್ಷ ದಿನೇಶ್, ಜಿಲ್ಲಾ ಉಪಾಧ್ಯಕ್ಷ ಹೂವಯ್ಯ ಮಾಸ್ಟರ್, ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಅರುಣ್ ಕೊತ್ನಳ್ಳಿ, ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ ಸೇರಿದಂತೆ ರೈತ ಮುಖಂಡರು, ರೈತ ಹೋರಾಟಗಾರರು, ಗ್ರಾಮಸ್ಥರು ಇದ್ದರು.