ಮಡಿಕೇರಿ, ಆ.೩: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಜೇಸಿಐ ಪಂಜ ಪಂಚಶ್ರೀ ಲಯನ್ಸ್ ಕ್ಲಬ್ ಪಂಜ ಇವರ ಸಹಕಾರದಲ್ಲಿ ಆಟಿ ತಿಂಗಳಿನ ಮಹತ್ವ ಮತ್ತು ನಮ್ಮ ಪೂರ್ವಜರು ಆಟಿ ತಿಂಗಳಿನಲ್ಲಿ ಆಚರಿಸುತ್ತಿದ್ದ ಆಚರಣೆಗಳು ಮತ್ತು ಸೇವಿಸುತ್ತಿದ್ದ ಆಹಾರಗಳ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಕೆ ನೀಡುವಂತಹ ಆಟಿ ನೆಂಪು-೨೦೨೬ ಕಾರ್ಯಕ್ರಮವು ತಾ. ೯ ರಂದು ಬೆಳಿಗ್ಗೆ ೧೦ ಗಂಟೆಗೆ ಪಂಜದ ಶ್ರೀ ಸದಾಶಿವ ಪರಿವಾರ ಪಂಚಲಿAಗೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ನಡೆಯಲಿದೆ.

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ನಂತರ ಸ್ಪರ್ಧೆಗಳು ನಡೆಯಲಿವೆ. ಮಧ್ಯಾಹ್ನ ೧೨ ಗಂಟೆಯಿAದ ಸಭಾ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ ಮತ್ತು ಕಲಾವಿದೆ ಮಿಲನ ಭರತ್ ಮುಖ್ಯ ಭಾಷಣಕಾರರಾಗಿ ಪಾಲ್ಗೊಳ್ಳಲಿದ್ದಾರೆ. ಜೇಸಿಐ ವಲಯ ಸಂಯೋಜಕರಾದ ಭಾಗ್ಯೇಶ್ ರೈ, ಲಯನ್ಸ್ ಜಿಲ್ಲಾ ಮಾಜಿ ಸಾರ್ವಜನಿಕ ಸಂಪರ್ಕಾಧಿಕಾರಿ ಜಯರಾಮ್ ದೇರಪ್ಪಜ್ಜನಮನೆ, ಶ್ರೀ ಪರಿವಾರ ಪಂಚಲಿAಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಆಟಿ ನೆಂಪು ಕಾರ್ಯಕ್ರಮದ ಅಂಗವಾಗಿ ವಾಟ್ಸಾಪ್‌ನಲ್ಲಿ ಅರೆಭಾಷೆ ಸ್ವರಚಿತ ಕವನ ಸ್ಪರ್ಧೆ, ಚಿನ್ನೆಮಣೆ ಸ್ಪರ್ಧೆ, ಅರೆಭಾಷೆ ಪ್ರಹಸನ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ, ಅರೆಭಾಷೆ ಭಾಷಣ ಸ್ಫರ್ಧೆ, ಆಟಿ ಖಾದ್ಯ ಸ್ಪರ್ಧೆ, ನೀರ್ ದೋಸೆ ಹೊಯ್ಯುವ ಸ್ಪರ್ಧೆ ಮತ್ತು ಹಸಿ ತರಕಾರಿಗಳನ್ನು ಆಲಂಕಾರಿಕವಾಗಿ ಜೋಡಿಸುವ ಸ್ಫರ್ಧೆಗಳು ನಡೆಯಲಿವೆ.

ಸಂಜೆ ೬.೩೦ ಗಂಟೆಯಿAದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಪ್ರಸ್ತುತಪಡಿಸುವ ಲೋಕೇಶ್ ಊರುಬೈಲ್ ನಿರ್ದೇಶನದ ‘ಅಪ್ಪ’ ಅರೆಭಾಷೆ ನಾಟಕ ಪ್ರದರ್ಶನಗೊಳ್ಳಲಿದೆ.