ಕೂಡಿಗೆ, ಆ. ೩: ೩೨ ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಕೂಡಿಗೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ಸೇವೆಯಿಂದ ನಿವೃತ್ತಿ ಹೊಂದಿದ ಶಿಕ್ಷಕ ಬಿ.ಕೆ. ಶಿವಶಂಕರ್ ಅವರನ್ನು ಶಾಲಾ ಶಿಕ್ಷಕರ ವತಿಯಿಂದ ಸನ್ಮಾನಿಸಿ, ಬೀಳ್ಕೊಡಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್. ಚೇತನ್, ಜಿಲ್ಲಾ ಸಂಘದ ಅಧ್ಯಕ್ಷ ಕೆ.ಎಸ್. ಪ್ರಸನ್ನ ಕುಮಾರ್, ಕಾರ್ಯದರ್ಶಿ ಟಿ.ಕೆ. ಬಸವರಾಜ್, ತಾಲೂಕು ಕಾರ್ಯದರ್ಶಿ ಟಿ.ಆರ್. ರಮೇಶ್, ಶಿಕ್ಷಕ ಸುರೇಶ್, ಶಾಲಾ ಮುಖ್ಯ ಶಿಕ್ಷಕ ಎಸ್.ಎ. ಯೋಗೇಶ್, ಶಿಕ್ಷಕರ ವರ್ಗ ಹಾಗೂ ನಿವೃತ್ತ ಶಿಕ್ಷಕ ಶಿವಶಂಕರ್ ಅವರ ಪತ್ನಿ ಮತ್ತು ಪುತ್ರ ಹಾಜರಿದ್ದರು.