ಮಡಿಕೇರಿ, ಆ. ೯: ದೇಶಾದ್ಯಂತ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಭಾರತ ಕಾಂಗ್ರೆಸ್ ಪಕ್ಷವು ಹಮ್ಮಿಕೊಂಡಿರುವ ಸಂಘಟನ್ ಸೃಜನ್ ಅಭಿಯಾನ ಕಾರ್ಯಕ್ರಮ ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ಚಾಲನೆಗೊಂಡಿತು.
ಜಿಲ್ಲಾ ಮಟ್ಟದಲ್ಲಿ ಮತ್ತು ಬ್ಲಾಕ್ ಮಟ್ಟದಲ್ಲಿ ಪಕ್ಷದ ಮುಖಂಡರು ಹಾಗೂ ಸಕ್ರಿಯ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಪಕ್ಷವನ್ನು ತಳಮಟ್ಟದಿಂದಲೇ ಪುನಶ್ಚೇತನಗೊಳಿಸುವ ಕಾಂಗ್ರೆಸ್ ಪಕ್ಷದ ಪ್ರಮುಖ ಕಾರ್ಯಕ್ರಮವಾಗಿದ್ದು ಎ.ಐ.ಸಿ.ಸಿ ಹಾಗೂ ಪಿ.ಸಿ.ಸಿ ವೀಕ್ಷಕರು ಈ ಕಾರ್ಯವನ್ನು ದೇಶದ ಎಲ್ಲಾ ಜಿಲ್ಲೆಗಳಲ್ಲಿ ನಡೆಸುತ್ತಿದ್ದಾರೆ.
ಸಭೆಯ ನಂತರ ಎ.ಐ.ಸಿ.ಸಿ ವೀಕ್ಷಕರಾಗಿ ಕೊಡಗು ಜಿಲ್ಲೆಗೆ ನಿಯೋಜನೆ ಗೊಂಡಿರುವ ಕೇರಳ ರಾಜ್ಯದ ನಾಡಪುರಂ ಕ್ಷೇತ್ರದ ಶಾಸಕ ಕೆ.ಎಂ. ಅಭಿಜಿತ್, ಕೆ.ಪಿ.ಸಿ.ಸಿ ವೀಕ್ಷಕರುಗಳಾದ ಆರ್.ವಿ. ವೆಂಕಟೇಶ್, ಮಮತಾ ಕಟ್ಟಿ, ಪದ್ಮನಾಭ್ ಅವರು ಜಿಲ್ಲಾ ಕಾಂಗ್ರೆಸ್‌ನ ಮುಖಂಡರಿAದ ಪ್ರತ್ಯೇಕವಾಗಿ ಅಭಿಪ್ರಾಯ ಸಂಗ್ರಹ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಮಾಜಿ ಸಂಸದರಾದ ಉಗ್ರಪ್ಪ, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ, ಬ್ರಿಜೇಶ್, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ. ಚಂದ್ರಕಲಾ, ಹೆಚ್.ಎಸ್. ಚಂದ್ರಮೌಳಿ ಸೇರಿದಂತೆ ಕೆಪಿಸಿಸಿ ಪ್ರಮುಖರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಜಿಲ್ಲಾ ಮಂಚೂಣಿ ಘಟಕಗಳ ಅಧ್ಯಕ್ಷರು, ಡಿ.ಸಿ.ಸಿ. ಸದಸ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.