ಮಡಿಕೇರಿ, ಆ. ೯: ಮಡಿಕೇರಿಯ ಪೇಟೆ ಶ್ರೀ ರಾಮಮಂದಿರ ದಸರಾ ಸಮಿತಿಯ ಸಭೆ ಮಡಿಕೇರಿಯ ಹೊಟೇಲ್ ಲೀ ಕೂರ್ಗ್ನ ಸಭಾಂಗಣದಲ್ಲಿ ಗೌರವ ಅಧ್ಯಕ್ಷ ಶಿವಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಮಿತಿಯ ಮುಂದಿನ ಕಾರ್ಯಕ್ರಮಗಳು, ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳು, ಸಂಘಟನೆಯ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಸದಸ್ಯರ ಜವಾಬ್ದಾರಿಗಳ ಕುರಿತು ಚರ್ಚೆ ನಡೆಯಿತು. ಸಭೆಯಲ್ಲಿ ಸದಸ್ಯರ ಒಮ್ಮತದ ನಿರ್ಣಯದಂತೆ ೨೦೨೬-೨೭ನೇ ಸಾಲಿನ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಆಯ್ಕೆಯಾದ ಎಲ್ಲ ಪದಾಧಿಕಾರಿಗಳು ಸಂಘಟನೆಯನ್ನು ಇನ್ನಷ್ಟು ಬಲಪಡಿಸುವುದು, ಶ್ರೀ ರಾಮನ ಸೇವಾ ಕಾರ್ಯಗಳನ್ನು ವ್ಯಾಪಕವಾಗಿ ಜನರಿಗೆ ತಲುಪಿಸುವುದು ಹಾಗೂ ಯುವಜನರನ್ನು ಸಂಘಟನೆಯೊAದಿಗೆ ಜೋಡಿಸುವ ನಿಟ್ಟಿನಲ್ಲಿ ಶ್ರಮಿಸುವುದಾಗಿ ಭರವಸೆ ನೀಡಿದರು.

ಅಧ್ಯಕ್ಷರಾಗಿ ಸುನಿಲ್ ಮುತ್ತಪ್ಪ, ಉಪಾಧ್ಯಕ್ಷರಾಗಿ ಪ್ರಮೋದ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಚೇತನ್ ಪೂಜಾರಿ, ಸಂಘಟನಾ ಕಾರ್ಯದರ್ಶಿಯಾಗಿ ವಿಘ್ನೇಶ್ ಜಿ.ಜಿ., ಖಜಾಂಚಿಗಳಾಗಿ ಹೇಮಂತ್ ಹಾಗೂ ಅಯ್ಯಪ್ಪ ಅವರುಗಳು ಸರ್ವಾನುಮತದಿಂದ ಆಯ್ಕೆಯಾದರು.

ಸಭೆಯಲ್ಲಿ ಉಪಸ್ಥಿತರಿದ್ದ ಸದಸ್ಯರು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸುವ ವಿಶ್ವಾಸ ವ್ಯಕ್ತಪಡಿಸಿದರು.