ವೀರಾಜಪೇಟೆ, ಆ. ೧೧: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ವೀರಾಜಪೇಟೆ ತಾಲೂಕು ಕೊಡಗು ಜಿಲ್ಲೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವೀರಾಜಪೇಟೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ವೀರಾಜಪೇಟೆ ಅಂಗಳ ಪರಮೇಶ್ವರಿ ಸಮುದಾಯ ಭವನದಲ್ಲಿ ಮುಂದಿನ ತಿಂಗಳು ನಡೆಯುವ ಮದ್ಯವರ್ಜನ ಶಿಬಿರದ ಪೂರ್ವಬಾವಿ ಸಭೆ ನಿಕಟಪೂರ್ವ ಅಧ್ಯಕ್ಷ ಬಾನಂಗಡ ಅರುಣ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ಸಭೆಯಲ್ಲಿ ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗ್ರತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಕಾರ್ಯಕ್ರಮದ ಉದ್ದೇಶ ಹಾಗೂ ಪೂರ್ವ ತಯಾರಿಯ ಬಗ್ಗೆ ಸಮಿತಿ ರಚನೆ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು. ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷರಾದ ಬಾನಂಗಡ ಅರುಣ್ ಮದ್ಯವರ್ಜನ ಶಿಬಿರದ ಪೂರ್ವ ತಯಾರಿಯ ಬಗ್ಗೆ ಶಿಬಿರಾರ್ಥಿಗಳ ಆಯ್ಕೆಯ ಬಗ್ಗೆ ತಿಳಿಸಿದರು.

ಇದೇ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ರಚನೆ ಮಾಡಲಾಗಿದೆ ಸಮಿತಿ ಅಧ್ಯಕ್ಷರಾಗಿ ಜೇಮ್ಸ್, ಗೌರವ ಅಧ್ಯಕ್ಷರಾಗಿ ಲಕ್ಷಿö್ಮ ಅವರುಗಳನ್ನು ಆಯ್ಕೆ ಮಾಡಲಾಯಿತು. ತಾಲೂಕಿನ ಯೋಜನಾಧಿಕಾರಿ ಹರೀಶ್ ಪಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಜನಜಾಗೃತಿ ವೇದಿಕೆ ಸದಸ್ಯರಾದ ದಯ ಚಂಗಪ್ಪ, ಸುಬ್ರಮಣಿ ಹಾಗೂ ಸಮಿತಿ ಸದಸ್ಯರು, ನಮ್ಮ ಜೀವನ ಸಮಿತಿ ಸದಸ್ಯರು ಒಕ್ಕೂಟದ ಅಧ್ಯಕ್ಷರು ನಮ್ಮ ನವಜೀವನ ಸಮಿತಿಯ ಪೋಷಕರು, ಎಲ್ಲಾ ಮೇಲ್ವಿಚಾರಕರು ಉಪಸ್ಥಿತರಿದ್ದರು.