ಸುಂಟಿಕೊಪ್ಪ, ಆ.೧೧: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‌ಬೈಲ್ ಒಕ್ಕೂಟ ಮತ್ತು ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರುಗಳು ಕಾನ್‌ಬೈಲ್ ಸರಕಾರಿ ಪ್ರೌಢಶಾಲಾ ಆವರಣ ಸೇರಿದಂತೆ ಸುತ್ತ ಮುತ್ತಲಿನ ಪರಿಸರದಲ್ಲಿ ಬೆಳೆದಿದ್ದ ಕಾಡು ಗಿಡ ಗಂಟಿಗಳನ್ನು ಕಡಿದು ಸ್ವಚ್ಚಗೊಳಿಸಿದರು.

ಶ್ರೀ ಕ್ಷೇ.ಧ.ಗ್ರಾ.ಯೋ. ವತಿಯಿಂದ ವಾರ್ಷಿಕ ಕಾರ್ಯಕ್ರಮಗಳಲ್ಲಿ ಒಂದಾದ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದಡಿಯಲ್ಲಿ ಸರಕಾರಿ ಪ್ರೌಢಶಾಲಾವರಣದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಶಾಲೆಯ ಮುಖ್ಯೋಪಾಧ್ಯಾಯ ಮೂರ್ತಿ ಚಾಲನೆ ನೀಡಿ ಮಾತನಾಡಿ, ಕಾನ್‌ಬೈಲ್ ಕಾರ್ಯಕ್ಷೇತ್ರದ ಸ್ವಸಹಾಯ ಸಂಘದ ಸದಸ್ಯರುಗಳು ವೈಯಕ್ತಿಕ ಅಭಿವೃದ್ಧಿಯೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‌ಬೈಲ್ ಕಾರ್ಯಕ್ಷೇತ್ರದ ಮಹಿಳಾ ಸ್ವ ಸಹಾಯ ಸಂಘಗಳಾದ ಭೂಮಿಕಾ, ಭಗವತಿ, ಕನ್ನಿಕಾ, ಶ್ರೀನಿಧಿ ಸ್ವಸಹಾಯ ಸಂಘಗಳ ಪ್ರಂಬಧಕರು ಹಾಗೂ ಸಂಘದ ಸದಸ್ಯರುಗಳು ಸ್ವಚ್ಛತಾ ಕಾರ್ಯವನ್ನು ಕೈಗೊಂಡರು.

ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಅಧ್ಯಕ್ಷೆ ಪೂರ್ಣಿಮಾ, ಒಕ್ಕೂಟದ ನಿಕಟಪೂರ್ವ ಅಧ್ಯಕ್ಷೆ ಖತೀಜ, ಗ್ರಾಮಸ್ಥ ಬಶೀರ್, ಶಾಲಾ ಶಿಕ್ಷಕಿ ಮಾಲಾ, ಸೇವಾ ಪ್ರತಿನಿಧಿ ಯಶೋಧ, ಸೇರಿದಂತೆ ಸ್ವಸಹಾಯ ಸಂಘದ ಸದಸ್ಯರು ಇದ್ದರು.