*ಗೋಣಿಕೊಪ್ಪ, ಆ. ೧೨: ದೇಶದ ಸ್ವಾತಂತ್ರö್ಯ, ಏಕತೆ, ಗೌರವ ಹಾಗೂ ತ್ಯಾಗದ ಸಂಕೇತವಾಗಿ ಭಾರತೀಯ ಜನತಾ ಪಕ್ಷದ ವೀರಾಜಪೇಟೆ ಮಂಡಲ ವತಿಯಿಂದ ‘ಹರ್ ಘರ್ ತಿರಂಗ’ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಮಂಡಲ ಅಧ್ಯಕ್ಷ ಮಾಚಿಮಂಡ ಸವಿನ್ ಗಣಪತಿ ತಿಳಿಸಿದರು.

ಗೋಣಿಕೊಪ್ಪದ ಬಿಜೆಪಿ ಮಂಡಲ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾ.೧೪ರಂದು ಬೆಳಗ್ಗೆ ೧೦ ಗಂಟೆಗೆ ಗೋಣಿಕೊಪ್ಪ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಿಂದ ಶ್ರೀ ಉಮಾಮಹೇಶ್ವರಿ ದೇವಸ್ಥಾನದವರೆಗೆ ತಿರಂಗ ಯಾತ್ರೆ ನಡೆಯಲಿದೆ. ಮಂಡಲ ವ್ಯಾಪ್ತಿಯ ೩೯ ಶಕ್ತಿ ಕೇಂದ್ರಗಳ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ತಿರಂಗ ಯಾತ್ರೆಯಲ್ಲಿ ವಿದ್ಯಾರ್ಥಿಗಳು, ಮಹಿಳೆಯರು, ರೈತರು, ವ್ಯಾಪಾರಿಗಳು ಸೇರಿದಂತೆ ವಿವಿಧ ಸಂಘ-ಸAಸ್ಥೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ತಾ.೧೩ರಿಂದ ೧೫ರವರೆಗೆ ಮೂರು ದಿನಗಳ ಕಾಲ ಬೆಳಿಗ್ಗೆ ೬ರಿಂದ ಸಂಜೆ ೬ರವರೆಗೆ ಪ್ರತಿಯೊಂದು ಮನೆಯಲ್ಲೂ ರಾಷ್ಟçಧ್ವಜ ಹಾರಿಸುವ ಮೂಲಕ ದೇಶಾಭಿಮಾನವನ್ನು ವ್ಯಕ್ತಪಡಿಸುವಂತೆ ಕರೆ ನೀಡಿದರು.

ಜಿಲ್ಲಾ ವಕ್ತಾರ ಮಾಚಿಮಾಡ ಎಂ. ರವೀಂದ್ರ ಮಾತನಾಡಿ, ದೇಶದ ಸ್ವಾತಂತ್ರö್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸುವುದರೊಂದಿಗೆ ಯುವಜನತೆಗೆ ಸ್ವಾತಂತ್ರö್ಯ ಹೋರಾಟದ ಹೆಜ್ಜೆ ಗುರುತುಗಳನ್ನು ಪರಿಚಯಿಸುವ ಕಾರ್ಯ ನಡೆಯಬೇಕು. ಈ ಉದ್ದೇಶದಿಂದ ಬಿಜೆಪಿ ವತಿಯಿಂದ ಸಾರ್ವಜನಿಕರ ದೊಡ್ಡ ಪ್ರಮಾಣದ ಭಾಗವಹಿಸುವಿಕೆಯೊಂದಿಗೆ ತಿರಂಗ ಯಾತ್ರೆ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗುಮ್ಮಟಿರ ಕಿಲನ್ ಗಣಪತಿ ಮಾತನಾಡಿ, ರಾಷ್ಟçಧ್ವಜಕ್ಕೆ ಗೌರವ ನೀಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಧ್ವಜವನ್ನು ಗೌರವದಿಂದ ಹಾರಿಸುವುದರ ಜತೆಗೆ ಅದನ್ನು ಸುರಕ್ಷಿತವಾಗಿ ಸಂರಕ್ಷಿಸಬೇಕು ಎಂದರು.

‘ಮನೆಗೊAದು ತಿರಂಗ, ಮನಸಿಗೊಂದು ದೇಶಭಕ್ತಿ’ ಎಂಬ ಸಂದೇಶದೊAದಿಗೆ ಕೊಡಗಿನಿಂದ ರಾಷ್ಟçಕ್ಕೆ ಬಲವಾದ ಸಂದೇಶ ಸಾರುವ ಮೂಲಕ ಜಿಲ್ಲೆಯನ್ನು ಮತ್ತಷ್ಟು ಪ್ರಚಲಿತಕ್ಕೆ ತರುವ ಕಾರ್ಯ ದೇಶಭಕ್ತರಿಂದ ನಡೆಯಬೇಕು ಎಂದು ಹೇಳಿದರು.

ಮಂಡಲ ಉಪಾಧ್ಯಕ್ಷ ಕುಲ್ಲಚಂಡ ಬೋಪಣ್ಣ ಮಾತನಾಡಿ, ಸ್ವಾತಂತ್ರ‍್ಯೋತ್ಸವÀ ಸಂದರ್ಭದಲ್ಲಿ ಪ್ಲಾಸ್ಟಿಕ್ ಧ್ವಜಗಳನ್ನು ಬಳಸದೆ ಸಾಂಪ್ರದಾಯಿಕ ಬಟ್ಟೆಯ ಧ್ವಜಗಳನ್ನು ಬಳಸುವ ಮೂಲಕ ರಾಷ್ಟçಧ್ವಜಕ್ಕೆ ಗೌರವ ಸಲ್ಲಿಸುವುದರ ಜತೆಗೆ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಬೇಕು ಎಂದರು.

ಮಂಡಲ ಉಪಾಧ್ಯಕ್ಷ ಮತ್ರಂಡ ಕಬೀರ್ ದಾಸ್ ಉಪಸ್ಥಿತರಿದ್ದರು.