ಮಡಿಕೇರಿ, ಆ. ೧೪: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಮಡಿಕೇರಿ ವಕೀಲರ ಸಂಘ ಸಂಪೂರ್ಣ ಬೆಂಬಲ ವ್ಯಕ್ತಪಡಿತು.
ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ ಪ್ರತಿದಿನ ೧೨ ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚಿಸಿರುವುದನ್ನು ಖಂಡಿಸಿ ವಕೀಲರು ಕೋರ್ಟ್ ಕಲಾಪಗಳಿಂದ ಹೊರಗುಳಿದು ಗುರುವಾರ ಪ್ರತಿಭಟನೆ ನಡೆಸಿದರು. ಮಡಿಕೇರಿ ವಕೀಲರ ಸಂಘದ ಕಾರ್ಯದರ್ಶಿ ಪವನ್ ಪೆಮ್ಮಯ್ಯ, ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ರಾಜ್ಯದ¯್ಲೆÃ ನೀರಿನ ಸಮಸ್ಯೆ ಎದುರಾಗಿರುವಾಗ ತಮಿಳುನಾಡಿಗೆ ನೀರು ಹರಿಸುವುದು ಹೇಗೆ ಎಂದು ಪ್ರಶ್ನಿಸಿದ ಅವರು, ಕಾವೇರಿ ನೀರು ಹಂಚಿಕೆ ವಿಚಾರವನ್ನು ಸರ್ಕಾರ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ ಗಂಭೀರವಾಗಿ ಪರಿಗಣಿಸಬೇಕು. ರಾಜ್ಯದ ಹಿತಾಸಕ್ತಿ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮಡಿಕೇರಿ ವಕೀಲರ ಸಂಘದ ಅಧ್ಯP್ಷÀ ಸಿ.ಟಿ.ಜೋಸೆಫ್, ಉಪಾಧ್ಯP್ಷÀ ಸಂಜಯ್ ರಾಜï, ಜಂಟಿ ಕಾರ್ಯದರ್ಶಿ ರಾಜೇಶ್, ಖಜಾಂಚಿ ಮೀನಾ ಕುಮಾರಿ ಸೇರಿದಂತೆ ಹಿರಿಯ ಹಾಗೂ ಕಿರಿಯ ವಕೀಲರು ಪಾಲ್ಗೊಂಡಿದ್ದರು.