ಚೆಯ್ಯಂಡಾಣೆ, ಆ. ೧೫: ಸ್ವಾತಂತ್ರö್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ವತಿಯಿಂದ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಯಿತು.
ಶಿಬಿರದಲ್ಲಿ ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಕೋಲೆಯಂಡ ಗಿರೀಶ್, ಪ್ರಧಾನ ಕಾರ್ಯದರ್ಶಿ ಎಂ.ಜಿ. ರಾಜು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಉಮಾ ಪ್ರಭು, ಓಬಿಸಿ ನಗರ ಮಂಡಲದ ಅಧ್ಯಕ್ಷ ಗಜೇಂದ್ರ, ಪ್ರಧಾನ ಕಾರ್ಯದರ್ಶಿ ಬಿ.ಎಂ.ರಾಜೇಶ್, ಜಿಲ್ಲಾ ಕಾರ್ಯದರ್ಶಿ ಬಿ.ಎಸ್. ಆನಂದ ಹಾಗೂ ಮೋರ್ಚಾದ ಪದಾಧಿಕಾರಿಗಳು, ಮತ್ತಿತರರು ಭಾಗವಹಿಸಿದ್ದರು.