ವೀರಾಜಪೇಟೆ, ಆ. ೧೫: ಸ್ವಾತಂತ್ರö್ಯ ತಂದು ಕೊಟ್ಟ ಹಿರಿಯರ ತ್ಯಾಗ ಬಲಿದಾನಕ್ಕೆ ನಾವು ಇಂದು ನಮನ ಸಲ್ಲಿಸುವುದರೊಂದಿಗೆ ದೇಶವನ್ನು ಕಟ್ಟುವ ಸಂಕಲ್ಪವನ್ನು ಮಾಡಬೇಕೆಂದು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರು ಹಾಗೂ ವೀರಾಜಪೇಟೆ ತಾಲೂಕು ತಹಶೀಲ್ದಾರ್ ಪ್ರವೀಣ್‌ಕುಮಾರ್ ಕರೆ ನೀಡಿದರು.

ವೀರಾಜಪೇಟೆಯ ತಾಲೂಕು ಮೈದಾನದಲ್ಲಿ ೮೦ನೇ ಸ್ವಾತಂತ್ರೊö್ಯÃತ್ಸವದ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಧ್ವಜರೋಹಣ ನೆರವೇರಿಸಿ ಪೊಲೀಸ್, ಎನ್‌ಸಿಸಿ, ಸ್ಕೌಟ್ ಗೈಡ್ಸ್ಗಳಿಂದ ಧ್ವಜ ವಂದನೆ ಸ್ವೀಕರಿಸಿ ನಂತರ ಅವರು ಮಾತನಾಡಿದರು. ಅಂದು ನಮ್ಮ ನಾಯಕರು ದೇಶ ಕಟ್ಟುವಲ್ಲಿ ಭದ್ರ ಬುನಾದಿ ಹಾಕಿ ಕೊಟ್ಟಿದ್ದು ಅದರಂತೆ ಇಂದು ದೇಶ ಬೆಳವಣಿಗೆಯನ್ನು ಕಾಣುತ್ತಿದೆ. ಇಂದು ನಾವು ಶಿಕ್ಷಣ ತಂತ್ರಜ್ಞಾನ ಮುಂತಾದ ಕ್ಷೇತ್ರದಲ್ಲಿ ಉತ್ತಮ ಬೆಡಳವಣಿಗೆಯನ್ನು ಸಾಧಿಸಿದ್ದು ದೇಶ ಪ್ರಗತಿ ಪಥದತ್ತ ಸಾಗುತ್ತಿದೆ. ಯುವ ಜನಾಂಗ ಇಂದು ಮಾದಕ ವಸ್ತುಗಳ ಸೇವನೆಯಿಂದ ದೂರ ಉಳಿಯುವ ಸಂಕಲ್ಪ ಮಾಡಬೇಕು. ದೇಶ ಪ್ರೇಮ ಬೆಳೆಸಿಕೊಂಡು ದೇಶವನ್ನು ಉಳಿಸಿ ಬೆಳೆಸುವಂತಾಗಬೇಕೆAದು ಪ್ರವೀಣ್‌ಕುಮಾರ್ ಹೇಳಿದರು.

ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಸಂವಿಧಾನವು ವಿಶ್ವದಲ್ಲಿಯೇ ವಿಶಿಷ್ಟವಾಗಿದೆ. ಇಂದು ದೇಶ ತಂತ್ರಜ್ಞಾನ, ಶಿಕ್ಷಣ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಸ್ವಾವಲಂಬಿಯಾಗುವತ್ತ ಹೆಜ್ಜೆ ಇಡುತ್ತಿರುವುದು ಹೆಮ್ಮೆಯ ವಿಚಾರ ಎಂದರು,

ಸಭೆಯನ್ನು ಉದೇಶಿಸಿ ವೀರಾಜಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಜಾನ್ಸನ್ ಮಾತನಾಡಿದರು.

ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಜೇಶ್ ಪದ್ಮನಾಭ, ಪುರಸಭೆಯ ಮುಖ್ಯಾಧಿಕಾರಿ ಪಟ್ಟಚೆರುವಂಡ ನಾಚಪ್ಪ, ವೀರಾಜಪೇಟೆ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ನಾಸೀರ್, ಪ್ರಬಾರ ಕ್ಷೇತ್ರ ಶಿಕ್ಷಣ ಅಧಿಕಾರಿ ಮಹೇಶ್, ವೀರಾಜಪೇಟೆ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್ ಮತ್ತು ಪದಾಧಿಕಾರಿಗಳು, ಡಿವೈಎಸ್‌ಪಿ ಮಹೇಶ್‌ಕುಮಾರ್, ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ನಗರ ಠಾಣಾಧಿಕಾರಿ ಪ್ರಮೋದ್, ಗ್ರಾಮಾಂತರ ಠಾಣಾಧಿಕಾರಿ ಲತಾ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭ ಮಾಜಿ ಸೈನಿಕರಾದ ಪಂದಿಕAಡ ಬೆಳ್ಯಪ್ಪ, ಐಚಂಡ ಕೆ ಮುತ್ತಣ್ಣ, ಕುಟ್ಟಂಡ ಹ್ಯಾರಿ ಅಪ್ಪಯ್ಯ, ಅಜ್ಜಿಯಂಡ ಸುಭಾಶ್ ಚಂದ್ರ , ಅಮ್ಮಣಿಚಂಡ ರವಿ ಉತ್ತಪ್ಪ ಹಾಗೂ ಕ್ರೀಡಾ ಪಟು ಸಂಜನಾ ರನ್ನು ಸನ್ಮಾನಿಸಲಾಯಿತು.

ಗ್ರಾಮಾಂತರ ಠಾಣಾಧಿಕಾರಿ ಲತಾ ಅವರು ಪಥಸಂಚಲನದ ನೇತೃತ್ವ ವಹಿಸಿದ್ದರು. ಇದೇ ಸಂದರ್ಭ ವೀರಾಜಪೇಟೆಯ ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಿಕ್ಷಣ ಇಲಾಖೆಯ ವಿಶಾಲಾಕ್ಷಿ, ಓಮನ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಕಂದಾಯ ಪರಿವೀಕ್ಷಕ ಹರೀಶ್, ಗ್ರೇಡ್ ಟೂ ತಹಶೀಲ್ದಾರ್ ಪ್ರದೀಪ್ ಸೇರಿದಂತೆ ತಾಲೂಕು ಕಚೇರಿ ಸಿಬ್ಬಂದಿ, ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ, ಶಿಕ್ಷಕರು, ಶಾಲಾ ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರು ಇದ್ದರು. ನಾಡಗೀತೆ, ರೈತಗೀತೆಯನ್ನು ವಿದ್ಯಾರ್ಥಿಗಳು ಹಾಡಿದರು.