ಸೋಮವಾರಪೇಟೆ, ಆ. ೧೫: ನಮ್ಮ ಪೂರ್ವಜರು ತ್ಯಾಗ, ಪ್ರಾಮಾಣಿಕತೆಯಿಂದ ನೀಡಿದ ಕೊಡುಗೆಯನ್ನು ಪ್ರತಿಯೋರ್ವ ಭಾರತೀಯನು ಅರ್ಥೈಸಿಕೊಂಡು ಮುಂದಿನ ಪೀಳಿಗೆಗೆ ಭವ್ಯ ಭಾರತದ ಕೊಡುಗೆಯನ್ನು ನೀಡಬೇಕಾಗಿದೆ ಎಂದು ತಾಲೂಕು ತಹಶೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಅಭಿಪ್ರಾಯಿಸಿ ದರು. ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ಆಡಳಿತದ ವತಿಯಿಂದ ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಸ್ವಾತಂತ್ರೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರೋತ್ಸವ ಸಂದೇಶವನ್ನು ನೀಡಿ ಅವರು ಮಾತನಾಡಿದರು. ಪ್ರತಿಯೊಬ್ಬ ನಾಗರಿಕನ ಬದುಕಿನಲ್ಲಿ ಸಮಾನ ಅವಕಾಶ, ಸಾಮಾಜಿಕ ನ್ಯಾಯ, ಸಮ ಸಮಾಜದ ಕನಸು ಸಾಕಾರಗೊಂಡಲ್ಲಿ ಮಾತ್ರ ನಿಜವಾದ ಸ್ವಾತಂತ್ರಕ್ಕೆ ಅರ್ಥ ಬರುತ್ತದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ನಮಗೆ ನೀಡಿರುವ ಸಂವಿಧಾನವು ಕೇವಲ ಒಂದು ಪುಸ್ತಕವಲ್ಲ. ಸ್ವಾತಂತ್ರö್ಯ,ನ್ಯಾಯ ಮತ್ತು ಸಹೋದರತ್ವದ ಮೌಲ್ಯಗಳು ಅಡಕಗೊಂಡಿವೆ ಎಂದರು.

ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದ ಶನಿವಾರಸಂತೆ ಸುಪ್ರಜಾ ಗುರುಕುಲ ವಿದ್ಯಾಸಂಸ್ಥೆಯ ಪ್ರಾಂಶುಪಾಲೆ ಡಿ. ಸುಜಲಾದೇವಿ ಮಾತನಾಡಿ, ಇಂದು ನಮಗೆ ಸಮಾನತೆಯ ಭಾರತ ಬೇಕಾಗಿದೆ. ಮಾನವೀಯತೆಗಿಂತ ದೊಡ್ಡ ಧರ್ಮ ಯಾವುದೂ ಇಲ್ಲ. ಭಾರತೀಯ ಸಂವಿಧಾನ ನಮಗೆ ನೀಡಿರುವ ಹಕ್ಕು ಮತ್ತು ಕರ್ತವ್ಯಗಳನ್ನು ಎಲ್ಲರೂ ಪಾಲಿಸಿದರೆ ಮಾತ್ರ ಬಲಿಷ್ಠ ಭಾರತ ನಿರ್ಮಾಣ ಸಾಧ್ಯ ಎಂದರು.

ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಎಂ. ಕಾಂತರಾಜು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸೋಮವಾರಪೇಟೆ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎ. ಆದಂ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ರಾಷ್ಟಿçÃಯ ಹಬ್ಬಗಳ ಸಮಿತಿ ಸದಸ್ಯರಾದ ಜಾನಕಿ ವೆಂಕಟೇಶ್, ಭುವನೇಶ್, ತಾಲೂಕು ಕ.ಸಾ.ಪ. ಅಧ್ಯಕ್ಷ ಎಸ್.ಡಿ. ವಿಜೇತ್, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭ ಮಾಜಿ ಸೈನಿಕರು, ಅಂತರಾಷ್ಟಿçÃಯ ಮಿಕ್ಸ್ ಬಾಕ್ಸಿಂಗ್‌ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ವಿಜೇತರಾದ ತಾಲೂಕಿನ ವಿವಿಧ ಶಾಲೆಯ ವಿದ್ಯಾರ್ಥಿಗಳು, ರಾಜ್ಯಮಟ್ಟದ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಪ್ರಶಸ್ತಿ ಪಡೆದ ವಿವಿಧ ಇಲಾಖೆಗಳ ಸಿಬ್ಬಂದಿ, ಎಸ್‌ಐಆರ್ ಪ್ರಕ್ರಿಯೆಯನ್ನು ಅತ್ಯುತ್ತಮವಾಗಿ ನಿರ್ವಹಿಸಿದ ಇಲಾಖಾ ನೌಕರರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ದೇಶಭಕ್ತಿ ಗಾಯನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.