ಕೂಡಿಗೆ, ಅ. ೧: ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ರೇಬೀಸ್ ದಿನಾಚರಣೆ ಕಾರ್ಯಕ್ರಮವನ್ನು ಗಿಡಕ್ಕೆ ನೀರನ್ನು ಹಾಕುವುದರ ಮೂಲಕ ಚಾಲನೆ ನೀಡಲಾಯಿತು.
ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವಜ್ಞ ವಿಶ್ವ ರೇಬೀಸ್ ದಿನಾಚರಣೆಯ ಮಹತ್ವವನ್ನು ಹಾಗೂ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.
ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪೂರ್ಣ ಮಾತನಾಡುತ್ತಾ ಅವರು ರೇಬೀಸ್ ಲಸಿಕೆಗಳ ಬಗ್ಗೆ ಹಾಗೂ ಚಿಕಿತ್ಸಾ ವಿಧಾನಗಳ ಬಗ್ಗೆ ಮತ್ತು ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿದರು. ಈ ಸಂಧರ್ಭ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಮುಖೇಶ್, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಹಾಜರಿದ್ದರು.