ಮಡಿಕೇರಿ, ಅ. ೧: ಸಮಾಜ ಸೇವೆಯ ಮೂಲಕ ಅಗತ್ಯವಿರುವ ಕುಟುಂಬಗಳು ಹಾಗೂ ಸರ್ಕಾರಿ ಶಾಲಾ ಮಕ್ಕಳಿಗೆ ನೆರವು ನೀಡುವ ಕಾರ್ಯ ನಿರಂತರವಾಗಬೇಕು ಎಂದು ಬೆಂಗಳೂರಿನ ಬನಶಂಕರಿ ಮಹಿಳಾ ಸಮಾಜ ಮತ್ತು ಲಕ್ಷ್ಮೀದೇವಿ ಮಹಿಳಾ ಟ್ರಸ್ಟ್ ಅಧ್ಯಕ್ಷ ಶಾಂತರಾಮಸ್ವಾಮಿ ಹೇಳಿದರು.

ಕುಶಾಲನಗರದ ದುಬಾರೆ ಆನೆ ಶಿಬಿರದ ಆನೆ ಮಾವುತರ ಕುಟುಂಬದವರಿಗೆ ಬೆಂಗಳೂರಿನ ಬನಶಂಕರಿ ಮಹಿಳಾ ಸಮಾಜ ಮತ್ತು ಲಕ್ಷ್ಮೀದೇವಿ ಮಹಿಳಾ ಟ್ರಸ್ಟ್ ವತಿಯಿಂದ ಬಟ್ಟೆ, ರೈನ್‌ಕೋಟ್, ಜಾಕೆಟ್ ಹಾಗೂ ಸ್ಥಳೀಯ ಸರ್ಕಾರಿ ಶಾಲೆಯ ಮಕ್ಕಳಿಗೆ ವಾಟರ್ ಬಾಟಲ್, ಶಾಲಾ ಬ್ಯಾಗ್ ಮತ್ತು ನೋಟ್ ಪುಸ್ತಕಗಳನ್ನು ಉಚಿತವಾಗಿ ವಿತರಿಸಿ ಅವರು ಮಾತನಾಡಿದರು.

ಆನೆಗಳ ಆರೈಕೆ ಹಾಗೂ ಸಂರಕ್ಷಣೆಯಲ್ಲಿ ಮಾವುತರು ಮತ್ತು ಅವರ ಕುಟುಂಬದವರ ಪಾತ್ರ ಮಹತ್ವದ್ದಾಗಿದೆ ಎಂದರು. ಈ ಸಂದರ್ಭ ಸೋಮವಾರಪೇಟೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್.ಪಿ ನವೀನ್ ಕುಮಾರ್, ಟ್ರಸ್ಟ್ನ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.