ಮಡಿಕೇರಿ ಅ. ೨೮: ಕೊಡಗು ಜಿಲ್ಲೆಯಲ್ಲಿ ಅನೇಕ ಸಮಸ್ಯೆಗಳು ತಾಂಡವವಾಡುತ್ತಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಶೀಘ್ರವೇ ಕೊಡಗು ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಸಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಅವರು ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಜಿಲ್ಲೆ ರಾಜ್ಯದ ಪ್ರಮುಖ ಪ್ರವಾಸೋದ್ಯಮ ಹಾಗೂ ಕಾಫಿ ಉತ್ಪಾದನಾ ಪ್ರದೇಶವಾಗಿದ್ದು, ಜಿಲ್ಲೆಯ ಜನರು ಹಲವು ಮೂಲಭೂತ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರಸ್ತೆ, ಕುಡಿಯುವ ನೀರು, ಆರೋಗ್ಯ, ಶಿಕ್ಷಣ, ಮೂಲಸೌಕರ್ಯ, ರೈತರ ಸಮಸ್ಯೆಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವು ಬೇಡಿಕೆಗಳು ಈಡೇರಬೇಕಿದೆ. ಜಿಲ್ಲೆಯ ಅಭಿವೃದ್ಧಿಗೆ ಸಂಬAಧಿಸಿದ ಸಮಸ್ಯೆಗಳಿಗೆ ಸರ್ಕಾರ ವಿಶೇಷ ಆದ್ಯತೆ ನೀಡಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕೊಡಗು ಜಿಲ್ಲೆಯ ಜನರ ಸಮಸ್ಯೆಗಳನ್ನು ಸಮಗ್ರವಾಗಿ ಚರ್ಚಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಸಚಿವ ಸಂಪುಟ ಸಭೆ ಸಹಕಾರಿಯಾಗಲಿದೆ. ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವುದರ ಜೊತೆಗೆ, ವಿವಿಧ ಇಲಾಖೆಗಳ ಬಾಕಿ ಉಳಿದಿರುವ ಯೋಜನೆಗಳಿಗೆ ವೇಗ ನೀಡುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯ ರಸ್ತೆಗಳೆಲ್ಲವೂ ಸಂಪೂರ್ಣವಾಗಿ ಹದಗೆಟ್ಟಿವೆ. ರಸ್ತೆ ಅವ್ಯವಸ್ಥೆಯಿಂದ ನಾಡಹಬ್ಬ ದಸರಾವನ್ನು ಕೂಡ ಅಕ್ಟೋಬರ್ ತಿಂಗಳಿನಲ್ಲಿ ಸುರಿದ ಮಳೆಗೆ ಭತ್ತ ಬೆಳೆ ನಷ್ಟವಾಗಿದೆ. ವನ್ಯಜೀವಿಗಳ ದಾಳಿ ತಡೆಗೆ ಶಾಶ್ವತ ಪರಿಹಾರ ಇಲ್ಲಿಯವರೆಗೆ ಜಾರಿಗೆ ಬಂದಿಲ್ಲ. ಅರಣ್ಯ ಭೂಮಿ ಮತ್ತು ಕೃಷಿ ಭೂಮಿ ನಡುವಿನ ವಿವಾದ ಹಾಗೇ ಮುಂದುವರಿದಿದ್ದು, ರೈತರು ಆತಂಕದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿ ಮತ್ತು ಯುವ ಜನಾಂಗಕ್ಕೆ ಉದ್ಯೋಗ ಸೃಷ್ಟಿಸವ ಯೋಜನೆಗಳು ನೆನೆಗುದಿಗೆ ಬಿದ್ದಿವೆ ಎಂದು ತಿಳಿಸಿದ್ದಾರೆ.