ಮಡಿಕೇರಿ, ಅ. ೨೮: ಮೈಸೂರು ಕಾಫಿ ಸಂಸ್ಕರಣ, ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಆಡಳಿತ ಮಂಡಳಿಯ ಮಾಸಿಕ ಸಭೆಯು ಮೈಸೂರಿನ ಸಂಘದ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷರೂ ಆಗಿರುವ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅಧ್ಯಕ್ಷತೆ ವಹಿಸಿ ಮಾಸಿಕ ವರದಿಯ ಬಗ್ಗೆ ಪರಿಶೀಲಿಸಿದರು. ಸಂಘದ ಇತರ ನಿರ್ದೇಶಕರು ಭಾಗವಹಿಸಿದ್ದ ಸಭೆಯಲ್ಲಿ ಹಿಂದಿನ ವರದಿಯನ್ನು ಪರಿಶೀಲಿಸುತ್ತಾ ಮುಂದಿನ ಅವಧಿಯಲ್ಲಿ ಕೈಗೊಳ್ಳಬೇಕಾದ ವಿವಿಧ ಕ್ರಮಗಳ ಬಗ್ಗೆ ಚರ್ಚಿಸಿದರು. ಸಂಘದ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಕೂಲಂಕಷವಾಗಿ ಮಾತುಕತೆ ನಡೆಸಿದರು. ಸಭೆಯಲ್ಲಿ ಉಪಾಧ್ಯಕ್ಷ ಜಿ.ಎಸ್. ಪ್ರಭುದೇವ, ನಿರ್ದೇಶಕರುಗಳು ಹಾಗೂ ಪ್ರಮುಖರು ಪಾಲ್ಗೊಂಡಿದ್ದರು.