ಗೋಣಿಕೊಪ್ಪಲು, ಅ. ೩೧: ಪೊನ್ನಂಪೇಟೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರ ಹಾಗೂ ಜೆಎಂಎಫ್ಸಿ ನ್ಯಾಯಾಲಯ ಶನಿವಾರ ಉದ್ಘಾಟನೆಯಾಯಿತು.
ಪೊನ್ನಂಪೇಟೆಯಲ್ಲಿರುವ ನ್ಯಾಯಾಲಯದ ಸಂಕೀರ್ಣದಲ್ಲಿ ನೂತನವಾಗಿ ಆರಂಭಿಸಲಾದ ಹಿರಿಯ ಸಿವಿಲ್ ನ್ಯಾಯಾಧೀಶರ ಹಾಗೂ ಜೆಎಂಎಫ್ಸಿ ನ್ಯಾಯಾಲಯವನ್ನು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ನೂತನ ತಾಲೂಕಾದ ಪೊನ್ನಂಪೇಟೆಯಲ್ಲಿ ನ್ಯಾಯಾಲಯ ಆರಂಭವಾಗಿರುವುದು ಸಂತಸದ ಸಂಗತಿ. ಅತ್ಯಂತ ಪ್ರೀತಿಯಿಂದ ಈ ಕಟ್ಟಡವನ್ನು ಉದ್ಘಾಟಿಸಿದ್ದೇನೆ. ಗ್ರಾಮೀಣ ಭಾಗದ ಜನರು ನ್ಯಾಯಕ್ಕಾಗಿ ದೂರದ ಊರುಗಳಿಗೆ ತೆರಳುವುದು ಕಷ್ಟಕರವಾಗಿತ್ತು. ಇದನ್ನು ಮನಗಂಡ ಹೈಕೋರ್ಟ್ ನ್ಯಾಯಮೂರ್ತಿಗಳು ಈ ಭಾಗದ ಜನರ ಅನುಕೂಲಕ್ಕಾಗಿ ನೂತನ ನ್ಯಾಯಾಲಯ ಆರಂಭಿಸಲು ಅನುಮತಿ ನೀಡಿದ್ದು, ಇದೀಗ ಅದು ಕಾರ್ಯಾರಂಭ ಮಾಡಿದೆ. ನ್ಯಾಯಾಲಯದ ಸೇವೆಗಳು ಜನರಿಗೆ ಸಕಾಲದಲ್ಲಿ ತಲುಪುವಂತಾಗಲಿ ಎಂದು ಹಾರೈಸಿದರು.
ಹೈಕೋರ್ಟ್ ನ್ಯಾಯಮೂರ್ತಿ ಎಂ.ಜಿ. ಶುಕುರೆ ಕಮಲ್ ಮಾತನಾಡಿ, ವ್ಯಾಜ್ಯಗಳು ಮನುಷ್ಯ ಸಂಬAಧಗಳ ಮೇಲೆ ಹಾಗೂ ಸಮಾಜದ ಮೇಲೆ ಬೀರುವ ಪರಿಣಾಮಗಳನ್ನು ಸೂಕ್ಷ್ಮವಾಗಿ ಅರಿತುಕೊಳ್ಳಬೇಕು. ನ್ಯಾಯದಾನದಲ್ಲಿ ವಿಳಂಬದಿAದ ಉಂಟಾಗುವ ಸಮಸ್ಯೆಗಳನ್ನು ಗಮನಿಸಬೇಕು. ವಕೀಲರು ಕಾಲಮಿತಿಯೊಳಗೆ ತಮ್ಮ ವಾದ ಮಂಡಿಸುವ ಮೂಲಕ ಕಕ್ಷಿದಾರರಿಗೆ ಸಕಾಲದಲ್ಲಿ ನ್ಯಾಯ ದೊರಕಿಸಿಕೊಡಲು ಸಹಕರಿಸಬೇಕು ಎಂದರು.
ಹೈಕೋರ್ಟ್ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಮಾತನಾಡಿ, ಕಕ್ಷಿದಾರರು ಮತ್ತು ನ್ಯಾಯಾಂಗದ ನಡುವಿನ ಸಂಬAಧದಲ್ಲಿ ಹಿರಿಯರ ಅನುಭವ ಹಾಗೂ ಯುವಕರ ಉತ್ಸಾಹ ಎರಡೂ ಬೆರೆತಾಗ ವ್ಯವಸ್ಥೆಗೆ ಮತ್ತಷ್ಟು ಶಕ್ತಿ ಬರುತ್ತದೆ. ಹಿರಿಯ ವಕೀಲರ ಸಲಹೆ ಮತ್ತು ಮಾರ್ಗದರ್ಶನದೊಂದಿಗೆ ಯುವ ವಕೀಲರು ಮುನ್ನಡೆಯಬೇಕು. ಕಕ್ಷಿದಾರರಿಗೆ ಸಕಾಲದಲ್ಲಿ ನ್ಯಾಯ ದೊರಕುವಂತಾಗಬೇಕು ಎಂದು ಆಶಿಸಿದರು.
ಹೈಕೋರ್ಟ್ ನ್ಯಾಯಮೂರ್ತಿ ಕೆ.ಎಸ್. ಭರತ್ ಕುಮಾರ್ ಮಾತನಾಡಿ, ನ್ಯಾಯಮೂರ್ತಿಗಳ ಮುಖದಲ್ಲಿ ಸದಾ ಮಂದಹಾಸವಿರಬೇಕು. ಇಂತಹ ಸಕಾರಾತ್ಮಕ ವಾತಾವರಣವನ್ನು ನಿವೃತ್ತ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಅವರಲ್ಲಿ ಅನೇಕ ಬಾರಿ ಕಂಡಿದ್ದೇವೆ. ಇದರಿಂದ ವಕೀಲರು ತಮ್ಮ ದೈನಂದಿನ ಒತ್ತಡಗಳನ್ನು ಬದಿಗಿಟ್ಟು ಉತ್ತಮವಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತದೆ. ಅವರ ಆದರ್ಶ ಗುಣಗಳನ್ನು ಎಲ್ಲರೂ ಪಾಲಿಸಬೇಕು ಎಂದರು.
ಹೈಕೋರ್ಟ್ ನ್ಯಾಯಮೂರ್ತಿ ಎಸ್. ರಾಚಯ್ಯ ಮಾತನಾಡಿ, ಪೊನ್ನಂಪೇಟೆಯಲ್ಲಿ ನ್ಯಾಯಾಲಯ ಆರಂಭಿಸುವ ನಿಟ್ಟಿನಲ್ಲಿ ಇಲ್ಲಿನ ವಕೀಲರ ಸಂಘದ ಪದಾಧಿಕಾರಿಗಳು ನಿರಂತರವಾಗಿ ಸಂಪರ್ಕದಲ್ಲಿದ್ದು, ಅಗತ್ಯ ಸಹಕಾರ ಕೋರಿದ್ದರು. ಈ ಪ್ರಯತ್ನಕ್ಕೆ ಪೂರಕವಾಗಿ ಸ್ಪಂದಿಸಿದ್ದೇನೆ. ನ್ಯಾಯಾಲಯದ ಆವರಣ ಹಾಗೂ ಕಲಾಪದ ವ್ಯವಸ್ಥೆ ಉತ್ತಮವಾಗಿದೆ. ಇದರ ಪ್ರಯೋಜನ ಗ್ರಾಮೀಣ ಭಾಗದ ಜನರಿಗೆ ದೊರಕುವಂತಾಗಬೇಕು. ನ್ಯಾಯಾಲಯದ ಮೇಲಿನ ೪ಆರನೇ ಪುಟಕ್ಕೆ
(ಮೊದಲ ಪುಟದಿಂದ) ಗೌರವ ಮತ್ತಷ್ಟು ಹೆಚ್ಚಾಗಬೇಕು ಎಂದರು.
ಮುಖ್ಯಮAತ್ರಿ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ, ಪೊನ್ನಂಪೇಟೆಯಲ್ಲಿ ನ್ಯಾಯಾಲಯ ಆರಂಭವಾಗಬೇಕೆAಬುದು ತಾಲೂಕಿನ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಇದಕ್ಕಾಗಿ ಹಿರಿಯ ವಕೀಲರು ಸೇರಿದಂತೆ ಅನೇಕ ಗಣ್ಯರು ಶ್ರಮಿಸಿದ್ದಾರೆ. ಇದೀಗ ಅದೇ ಸಂಕೀರ್ಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರ ಹಾಗೂ ಜೆಎಂಎಫ್ಸಿ ನ್ಯಾಯಾಲಯ ಆರಂಭವಾಗಿರುವುದು ಸಂತಸದ ಸಂಗತಿ. ಗ್ರಾಮೀಣ ಭಾಗದ ಜನರು ದೂರದ ವೀರಾಜಪೇಟೆ ಹಾಗೂ ಮಡಿಕೇರಿ ನ್ಯಾಯಾಲಯಗಳಿಗೆ ತೆರಳುವ ಅನಿವಾರ್ಯತೆ ತಪ್ಪಿದ್ದು, ಸ್ಥಳೀಯರು ಇದರ ಸದುಪಯೋಗ ಪಡೆದುಕೊಳ್ಳಬೇಕು. ವಕೀಲರು ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದರು.
ಹೈಕೋರ್ಟ್ ವಕೀಲ ಎಂ. ಸುರೇಶ್ ಅಯ್ಯಪ್ಪ ಅವರು ಈ ನಿಟ್ಟಿನಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳೊಂದಿಗೆ ಅಗತ್ಯ ಪತ್ರ ವ್ಯವಹಾರ ನಡೆಸುವ ಮೂಲಕ ನ್ಯಾಯಾಲಯ ಆರಂಭಕ್ಕೆ ಪ್ರಮುಖ ಪಾತ್ರ ವಹಿಸಿದ್ದರು. ಈ ಸೇವೆಯನ್ನು ಗುರುತಿಸಿ ಪೊನ್ನಂಪೇಟೆ ವಕೀಲರ ಸಂಘದ ವತಿಯಿಂದ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಹೈಕೋರ್ಟ್ ನ್ಯಾಯಮೂರ್ತಿ ಕೆ.ಜಿ. ಶಾಂತಿ, ವಕೀಲ ಎಂ. ಸುರೇಶ್ ಅಯ್ಯಪ್ಪ, ಕೊಡಗು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಾರುತಿ ಎಸ್. ಬಗಡೆ ಪಾಲ್ಗೊಂಡಿದ್ದರು. ಅಲ್ಲದೆ, ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ ಹಾಗೂ ಕುಶಾಲನಗರ ವಕೀಲರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಪೊನ್ನಂಪೇಟೆ ತಹಶೀಲ್ದಾರ್ ಸಂಜನಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ನ್ಯಾಯಾಲಯದ ಆವರಣದಲ್ಲಿ ಸೇವಾ ಕೇಂದ್ರಕ್ಕೆ ಚಾಲನೆ ನೀಡಲಾಯಿತು.
ಆರಂಭದಲ್ಲಿ ಸುಧಾ ಪ್ರಸಾದ್ ಪ್ರಾರ್ಥಿಸಿದರು. ವಕೀಲ ಸಂಜೀವ್ ಕಾರ್ಯಕ್ರಮ ನಿರೂಪಿಸಿದರು. ವಕೀಲರ ಸಂಘದ ಅಧ್ಯಕ್ಷ ಎಂ.ಜಿ. ರಾಕೇಶ್ ಸ್ವಾಗತಿಸಿ, ಕಾರ್ಯದರ್ಶಿ ಗಿರೀಶ್ ಅಣ್ಣಯ್ಯ ವಂದಿಸಿದರು.